ಸೋಮವಾರ, ಜುಲೈ 26, 2021
21 °C

ಕುಡುಪು ದೇವಸ್ಥಾನ: ಭಕ್ತರ ಪ್ರವೇಶಕ್ಕೆ ನಿರ್ಬಂಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಕೊರೊನಾ ಕಾರಣದಿಂದಾಗಿ ನಾಗರಪಂಚಮಿ ದಿನವಾದ ಇದೇ 25 ರಂದು ಕುಡುಪು ದೇವಸ್ಥಾನಕ್ಕೆ ಸಾರ್ವಜನಿಕರ ಭೇಟಿಯನ್ನು ನಿರ್ಬಂಧಿಸಲಾಗಿದೆ.

ಈ ಬಗ್ಗೆ ಪ್ರಕಟಣೆ ನೀಡಿರುವ ಕುಡುಪು ಅನಂತ ಪದ್ಮನಾಭ ದೇವಸ್ಥಾನದ ಆಡಳಿಯ ಮಂಡಳಿ, ‘ಕ್ಷೇತ್ರದಲ್ಲಿ ಪ್ರತಿ ವರ್ಷ ಆಚರಿಸುವ ನಾಗರಪಂಚಮಿಯು ಈ ಬಾರಿ ಇದೇ 25 ರಂದು ನಿಗದಿಯಾಗಿದ್ದು, ಕೋವಿಡ್‌ 19 ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಅಧಿಕ ಸಂಖ್ಯೆಯಲ್ಲಿ ಭಕ್ತಾದಿಗಳನ್ನು ಬರುವುದನ್ನು ತಡೆಯಲಾಗಿದೆ. ಮುಂಜಾಗ್ರತಾ ಕ್ರಮವಾಗಿ ನಾಗರ ಪಂಚಮಿಯಂದು ಭಕ್ತಾದಿಗಳಿಗೆ ಕ್ಷೇತ್ರ ಭೇಟಿಯನ್ನು ನಿರ್ಬಂಧಿಸಲಾಗಿದೆ. ಯಾವುದೇ ಭಕ್ತರು ದೇವಾಲಯಕ್ಕೆ ಭೇಡಿ ನೀಡದೇ ಸಹಕರಿಸುವಂತೆ’ ಮನವಿ ಮಾಡಿದೆ.

‘ನಾಗರ ಪಂಚಮಿಯಂದು ದೇವಾಲಯದಲ್ಲಿ ಯಾವುದೇ ಸೇವೆಗಳು, ತೀರ್ಥ, ಪ್ರಸಾದ ವಿತರಣೆ ಮತ್ತು ಅನ್ನಸಂತರ್ಪಣೆಗಳು ಇರುವುದಿಲ್ಲ. ಆ ದಿನದಂದು ಹಾಲು, ಸೀಯಾಳ, ಹಣ್ಣುಕಾಯಿ ಮತ್ತಿತರ ಯಾವುದೇ ಪೂಜಾ ಸಾಮಗ್ರಿಗಳನ್ನು ಸ್ವೀಕರಿಸಲಾಗುವುದಿಲ್ಲ. ಮುಂದಿನ ದಿನಗಳಲ್ಲಿ ಅನುಕೂಲಕರ ಪರಿಸ್ಥಿತಿ ಉಂಟಾದಾಗ ಭಕ್ತಾದಿಗಳಿಗೆ ಸೇವೆಗಳನ್ನು ನಡೆಸಲು ಅವಕಾಶ ಕಲ್ಪಿಸಲಾಗುವುದು’ ಎಂದು ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.