ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

 ಕುಕ್ಕೆ: ಮೊಸರು ಕುಡಿಕೆ ಉತ್ಸವ

ಸುಬ್ರಹ್ಮಣ್ಯ ದೇವಳದಲ್ಲಿ ಶ್ರೀಕೃಷ್ಣಾಷ್ಟಮಿ, ಪಾಲಕಿಯಲ್ಲಿ ಬಂದ ಬಿರುದಾವಳಿ
Last Updated 31 ಆಗಸ್ಟ್ 2021, 16:13 IST
ಅಕ್ಷರ ಗಾತ್ರ

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಳದಲ್ಲಿ ಶ್ರೀಕೃಷ್ಣಾಷ್ಟಮಿ ಮತ್ತು ಮೊಸರು ಕುಡಿಕೆ ಉತ್ಸವವನ್ನು ಮಂಗಳವಾರ ಸಂಜೆ ಆಚರಿಸಲಾಯಿತು.

ಕಾಶಿಕಟ್ಟೆ ಮಹಾಗಣಪತಿ ಸನ್ನಿಧಿಯಲ್ಲಿಯಲ್ಲಿ ಅಷ್ಟಮಿಯಂದು ಪೂಜಿತವಾದ ಕೃಷ್ಣನ ವಿಗ್ರಹವನ್ನು ಸ್ಥಳೀಯ ಮೂಲ ನಿವಾಸಿಗಳಾದ ಮಲೆಕುಡಿಯ ಸಮುದಾಯದವರು ಪಾಲಕಿಯಲ್ಲಿ ಬಿರುದಾವಳಿ, ಮಂಗಳವಾದ್ಯದ ಮೂಲಕ ಮೆರವಣಿಗೆಯಲ್ಲಿ ದೇವಳಕ್ಕೆ ತಂದರು.

ದೇವಳಕ್ಕೆ ಪ್ರದಕ್ಷಿಣೆ ಬಂದ ಬಳಿಕ ಕಾಶಿಕಟ್ಟೆಗೆ ಉತ್ಸವ ತೆರಳುವ ಸಂದರ್ಭದಲ್ಲಿ ರಥಬೀದಿಯಿಂದ ಕಾಶಿಕಟ್ಟೆ ವರೆಗೆ ಅಲ್ಲಲ್ಲಿ ಕಂಬದಲ್ಲಿ ಕಟ್ಟಿದ್ದ ಮೊಸರು ತುಂಬಿದ ಕುಡಿಕೆಗಳನ್ನು ಮಹಿಳೆಯರು ಒಡೆದು ಜನ್ಮಾಷ್ಟಮಿಯನ್ನು ಆಚರಿಸಿದರು. ಅಂತಿಮವಾಗಿ ಕಾಶಿಕಟ್ಟೆಯಲ್ಲಿ ಇರಿಸಿದ್ದ ಮೊಸರಿನ ಗಡಿಗೆಗಳನ್ನು ಒಡೆಯಲಾಯಿತು. ಕಾಶಿಕಟ್ಟೆಯಲ್ಲಿ ಭಗವಾನ್ ಶ್ರೀಕೃಷ್ಣನಿಗೆ ಮಹಾಪೂಜೆ ನೆರವೇರಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT