ಶನಿವಾರ, ಸೆಪ್ಟೆಂಬರ್ 25, 2021
22 °C

ಕುಮಾರಧಾರಾ ಸ್ನಾನಘಟ್ಟ ಮುಳುಗಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ಹಾಗೂ ಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ನಿರಂತರ ಮಳೆಗೆ ಕುಮಾರಧಾರಾ ಸ್ನಾನಘಟ್ಟ ಮತ್ತೆ ಮುಳುಗಡೆಯಾಗಿದೆ.

ನದಿಯಲ್ಲಿ ಕಡಿಮೆಯಾಗಿದ್ದ ನೀರು ಶುಕ್ರವಾರ ಹೆಚ್ಚಳಗೊಂಡಿದೆ. ಸ್ನಾನಘಟ್ಟ ಹಾಗೂ ಕಿಂಡಿ ಅಣೆಕಟ್ಟೆ ಸಂಪೂರ್ಣ ಮುಳುಗಡೆಯಾಗಿದೆ. ನದಿಯಲ್ಲಿ ನೀರಿನ ಹರಿವು ಹೆಚ್ಚುತ್ತಿದೆ. ಮುಂಜಾಗ್ರತಾ ಕ್ರಮವಾಗಿ ನದಿ ದಡದಲ್ಲಿ ಗೃಹರಕ್ಷಕ ದಳದ ಸಿಬ್ಬಂದಿ ಕರ್ತವ್ಯದಲ್ಲಿದ್ದಾರೆ. ಸುಬ್ರಹ್ಮಣ್ಯ, ಪಂಜ, ಯೇನೆಕಲ್ಲು, ಬಳ್ಪ, ಕೊಲ್ಲಮೊಗ್ರು, ಹರಿಹರ ಪಲ್ಲತ್ತಡ್ಕ, ಗುತ್ತಿಗಾರು, ಬಿಳಿನೆಲೆ, ಕಲ್ಲುಗುಡ್ಡೆ, ಇಚ್ಲಂಪಾಡಿ, ಕೊಣಾಜೆ ವ್ಯಾಪ್ತಿಯಲ್ಲಿ ನಿರಂತರ ಮಳೆಯಾಗುತ್ತಿದೆ. ಸಣ್ಣ ಪುಟ್ಟ ಹಳ್ಳ, ತೋಡುಗಳು ತುಂಬಿ ಹರಿಯುತ್ತಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.