ಸುಬ್ರಹ್ಮಣ್ಯ: ಏಕಬಳಕೆ ಪ್ಲಾಸ್ಟಿಕ್ ತಪಾಸಣೆ ಗಾಗಿ ಕುಕ್ಕೆ ಸುಬ್ರಹ್ಮಣ್ಯ ಸಂಪರ್ಕಿಸುವ ನಾಲ್ಕೂ ಪ್ರವೇಶ ರಸ್ತೆಗಳಲ್ಲಿ ತಪಾಸಣಾ ಕೇಂದ್ರ ಸ್ಥಾಪಿಸಲು ಆದೇಶ ನೀಡಲಾಗಿದೆ. ಚೆಕ್ಪೋಸ್ಟ್ಗಳಲ್ಲಿ 2 ಹಂತದ ತಪಾಸಣೆ ಮಾಡಲಾಗುವುದು ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದರು.

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವಾಲಯಕ್ಕೆ ಬರುವಾಗ ರಸ್ತೆಯ ಬದಿಯಲ್ಲಿ ಪ್ಲಾಸ್ಟಿಕ್ ಬಾಟಲಿ, ತಟ್ಟೆ ಇತ್ಯಾದಿ ಬಿದ್ದಿರುವುದನ್ನು ನೋಡಿ ಆತಂಕವಾಯಿತು. ಈ ಸಂಬಂಧ ಅಧಿಕಾರಿಗಳೊಂದಿಗೆ ಚರ್ಚಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.

ರಾಜ್ಯದಲ್ಲಿ ಡೀಮ್ಡ್ ಅರಣ್ಯಕ್ಕೆ ಸಂಬಂಧಿಸಿ ಸಮಸ್ಯೆ ಇದೆ. ಸಮಸ್ಯೆ ಪರಿ ಹರಿಸಲು ಕಂದಾಯ ಇಲಾಖೆಯ ಜೊತೆ ಜಂಟಿ ಸರ್ವೆ ನಡೆಸಲಾಗುತ್ತಿದೆ ಎಂದರು.

ಕಂದಾಯ ಇಲಾಖೆಯಲ್ಲಿ ಮೋಜಿಣಿದಾರರು ಕೆಲ ತಿಂಗಳಿಂದ ಮುಷ್ಕರ ನಡೆಸುತ್ತಿದ್ದಾರೆ. ಜೊತೆಗೆ ಸರ್ವೆಯರ್ಗಳ ಕೊರತೆ ಇರುವುದಾಗಿ ಉಡುಪಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಅರಣ್ಯ ಜಂಟಿ ಸರ್ವೆಗಾಗಿ ವಿಶೇಷ ಸಿಬ್ಬಂದಿ ನಿಯೋಜಿಸಲು ತಿಳಿಸಿದ್ದು ಈ ಬಗ್ಗೆ ಕಂದಾಯ ಸಚಿವರೊಂದಿಗೆ ಸಮಾಲೋಚಿಸುವುದಾಗಿ ತಿಳಿಸಿದರು.

ಮಾನವ-ವನ್ಯಜೀವಿ ಸಂಘರ್ಷ ನಿಯಂತ್ರಣಕ್ಕೆ ಕ್ರಮ: ಮಾನವನ ಜೀವ ಅತ್ಯಮೂಲ್ಯವಾಗಿದ್ದು, ಪ್ರಾಣಹಾನಿ ಆಗಬಾರದು. ಈ ಬಗ್ಗೆ ಕ್ರಮ ವಹಿಸಲು ಅರಣ್ಯಾಧಿಕಾರಿಗಳಿಗೆ ತಿಳಿಸಲಾಗಿದೆ. ವನ್ಯಜೀವಿಗಳ ಸಂಚಾರದ ಬಗ್ಗೆ ನಿಗಾ ಇಡಲು ಡ್ರೋನ್ ಸೇರಿದಂತೆ ಅತ್ಯಾಧುನಿಕ ಉಪಕರಣಗಳನ್ನು ಬಳಸಲಾಗುತ್ತಿದೆ. ಕಮಾಂಡ್ ಸೆಂಟರ್ ತೆರೆಯಲಾಗಿದೆ ಎಂದು ತಿಳಿಸಿದರು.

ಕುಕ್ಕೆ ಸುಬ್ರಹ್ಮಣ್ಯಕ್ಕೆ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ಅವರ ಮೇಲೆ ವನ್ಯಜೀವಿ ದಾಳಿ ಮಾಡದಂತೆ ಎಚ್ಚರ ವಹಿಸಲು ಮತ್ತು ಚಿರತೆ ಸಮಸ್ಯೆ ಇರುವ ಕಡೆಗೆ ಹೆಚ್ಚಿನ ಬೋನು ಇಡಲು, ಆನೆಗಳು ಬಾರದಂತೆ ಕಂದಕ ಕಾಮಗಾರಿ ಪೂರ್ಣಗೊಳಿಸಲು, ಸೌರ ತಂತಿ ಬೇಲಿ ಅಳವಡಿಸಲು ಸೂಚನೆ ನೀಡಿದರು.

ಕ್ರಿಮಿನಲ್ ಮೊಕದ್ದಮೆ: ಕುಮಾರಧಾರಾ ನದಿಗೆ ತ್ಯಾಜ್ಯವನ್ನು ನೇರವಾಗಿ ಹರಿಯಬಿಡುತ್ತಿರುವವರ ಮೇಲೆ ಕ್ರಮ ವಹಿಸಲು ಸೂಚಿಸಿದ ಈಶ್ವರ ಖಂಡ್ರೆ, ಸ್ಥಳೀಯ ಸಂಸ್ಥೆಗಳು ಈ ಬಗ್ಗೆ ನಿಗಾ ಇಡಬೇಕು. ತ್ಯಾಜ್ಯ ಸಂಸ್ಕರಣಾ ಘಟಕಗಳ ಪರಿಶೀಲನೆ ಮಾಡಬೇಕು. ಸಂಸ್ಕರಿಸದೆ ತ್ಯಾಜ್ಯ ನದಿಗೆ ಬಿಟ್ಟಿದ್ದರೆ ಮೊದಲಿಗೆ ಎಚ್ಚರಿಕೆ ನೀಡಬೇಕು. ಪದೇ ಪದೇ ತಪ್ಪು ಮಾಡಿದರೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಸೂಚಿಸಿದರು.

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಎಸ್.ಇಂಜಾಡಿ, ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ತಾಲ್ಲೂಕು ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ, ಗೇರು ನಿಗಮ ಅಧ್ಯಕ್ಷೆ ಮಮತಾ ಗಟ್ಟಿ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಅಶೋಕ್ ನೆಕ್ರಾಜೆ, ಲೀಲಾ ಮನಮೋಹನ್, ಸೌಮ್ಯ ಭರತ್, ಪ್ರವೀಣ ರೈ ಮರುವಂಜ, ಮಾಸ್ಟರ್ ಪ್ಲ್ಯಾನ್ ಸಮಿತಿ ಸದಸ್ಯ ಲೋಲಾಕ್ಷ ಕೈಕಂಬ, ಪ್ರಮುಖರಾದ ಅಭಿಲಾಶ್, ಗೋಪಾಲ್ ಎಣ್ಣೆಮಜಲು ಜತೆಗಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-29-652046901

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.