ಸುಬ್ರಹ್ಮಣ್ಯ (ದಕ್ಷಿಣ ಕನ್ನಡ): ಅಡುಗೆ ಅನಿಲ ಸಿಲಿಂಡರ್ ಕೊರತೆ ಕಾರಣ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಬೆಳಗಿನ ಉಪಾಹಾರ ವಿತರಣೆಯಲ್ಲಿ ಬುಧವಾರದಿಂದ ಬದಲಾವಣೆ ಮಾಡಲಾಗಿದೆ.

ಪ್ರತಿದಿನ ಭಕ್ತರಿಗೆ ವಿವಿಧ ಬಗೆಯ ಬಿಸಿ ಉಪಾಹಾರ ವಿತರಿಸಲಾಗುತ್ತಿತ್ತು. ಬೇಯಿಸುವ ತಿನಿಸುಗಳ ಬದಲಿಗೆ ಅವಲಕ್ಕಿ, ಮೊಸರು ವಿತರಣೆ ಮಾಡಲಾಗುತ್ತಿದೆ. ಸದ್ಯ ದೇವಸ್ಥಾನದಲ್ಲಿ ಮೂರು ದಿನಗಳವರೆಗೆ ಬೇಕಾಗುವಷ್ಟು ಸಿಲಿಂಡರ್ಗಳು ಮಾತ್ರ ಲಭ್ಯ ಇವೆ. ಪೂರೈಕೆ ಆಗದೆ ಇದ್ದಲ್ಲಿ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ. ಈಗಾಗಲೇ ದಿನಕ್ಕೆ 20 ಸಿಲಿಂಡರ್ ಪೂರೈಕೆ ಮಾಡುವಂತೆ ಸಂಬಂಧಿಸಿದ ಸಂಸ್ಥೆಗಳಿಗೆ ಪತ್ರ ಬರೆಯಲಾಗಿದೆ ಎಂದು ದೇವಸ್ಥಾನದ ಮೂಲಗಳು ತಿಳಿಸಿವೆ.

ಸಿಲಿಂಡರ್ ಸಮಸ್ಯೆ ಮುಂದುವರಿದರೆ ಮಧ್ಯಾಹ್ನದ ಭೋಜನ ವಿತರಣೆಯಲ್ಲೂ ಬದಲಾವಣೆ ಮಾಡಲು ದೇವಸ್ಥಾನದ ಆಡಳಿತ ಚಿಂತನೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.