ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ ಮತ್ತು ಉಮಾಮಹೇಶ್ವರನಿಗೆ ಶಿವರಾತ್ರಿ ರಥೋತ್ಸವ ಸೋಮವಾರ ಸಂಜೆ ನೆರವೇರಿತು.

ಒಂದೇ ಪಲ್ಲಕಿಯಲ್ಲಿ ಕುಕ್ಕೆ ಸುಬ್ರಹ್ಮಣ್ಯ ಮತ್ತು ಉಮಾಮಹೇಶ್ವರ ದೇವರು ರಥಬೀದಿಗೆ ಬಂದು ರಥಾರೋಹಣರಾದರು. ಬಳಿಕ ಅಲಂಕೃತ ಚಿಕ್ಕರಥದಲ್ಲಿ ಶಿವರಾತ್ರಿ ಉತ್ಸವ ನೆರವೇರಿತು. ಅವಳಿ ದೇವರ ರಥಾರೋಹಣರಾದ ಬಳಿಕ ಮಂಗಳ ವಾದ್ಯಗಳೊಂದಿಗೆ ರಥೋತ್ಸವ ನೆರವೇರಿತು. ಬಳಿಕ ವಾಸುಕಿ ಛತ್ರದ ಶಿವರಾತ್ರಿ ಕಟ್ಟೆಯಲ್ಲಿ ಕಟ್ಟೆಪೂಜೆ ನಡೆಯಿತು.

ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಎಸ್.ಇಂಜಾಡಿ, ಇಒ ಅರವಿಂದ ಅಯ್ಯಪ್ಪ ಸುತಗುಂಡಿ, ಎಇಒ ಎಸ್.ಜೆ.ವೈ.ರಾಜ್, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಅಶೋಕ್ ನೆಕ್ರಾಜೆ, ಅಜಿತ್ ಕುಮಾರ್, ಸೌಮ್ಯಾ ಭರತ್, ಅಧೀಕ್ಷಕ ಕೆ.ಎಂ.ಗೋಪಿನಾಥ್, ದೇವಳದ ಹೆಬ್ಬಾರ್ ಪ್ರಸನ್ನ ಭಟ್, ಪಾಟಾಳಿ ಲೋಕೇಶ್ ಎ.ಆರ್. ಭಾಗವಹಸಿದ್ದರು.

ಭಾನುವಾರ ರಾತ್ರಿ ಶಿವರಾತ್ರಿ ಪ್ರಯುಕ್ತ ಕುಕ್ಕೆಸುಬ್ರಹ್ಮಣ್ಯ ದೇವರಿಗೆ ಮತ್ತು ಉಮಾಮಹೇಶ್ವರನಿಗೆ ಜೊತೆಯಾಗಿ ಉತ್ಸವ ನೆರವೇರಿತು. ದೇವಳದ ಪ್ರಧಾನ ಅರ್ಚಕ ಸೀತಾರಾಮ ಎಡಪಡಿತ್ತಾಯ ಅವರು ವೈದಿಕ ವಿದಿವಿಧಾನ ನೆರವೇರಿಸಿದರು. ದೇವಳದಲ್ಲಿ ಶಿವರಾತ್ರಿಯಂದು ಏಕಾದಶಿ ಉಪವಾಸ ನೆರವೇರಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.