ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಳೂರು ನೂತನ ಪೊಲೀಸ್ ಕಮಿಷನರ್ ಆಗಿ ಕುಲದೀಪ್ ಜೈನ್ ಅಧಿಕಾರ ಸ್ವೀಕಾರ

Last Updated 24 ಫೆಬ್ರುವರಿ 2023, 7:16 IST
ಅಕ್ಷರ ಗಾತ್ರ

ಮಂಗಳೂರು: ನಗರ ಪೊಲೀಸ್ ಕಮಿಷನರ್ ಆಗಿ ಕುಲದೀಪ್ ಜೈನ್ ಶುಕ್ರವಾರ ಅಧಿಕಾರ ಸ್ವೀಕರಿಸಿದರು.
ಭ್ರಷ್ಟಾಚಾರವನ್ನು ಸಹಿಸಲಾಗದು. ಅಧಿಕಾರಿಗಳ ವಿರುದ್ಧ ಯಾವುದೇ ರೀತಿಯ ಭ್ರಷ್ಟಾಚಾರದ ದೂರುಗಳು ಬಂದರೆ ಅವರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಜನರಿಗೆ ಅನುಕೂಲವಾಗುವಂತೆ ಸಿಬ್ಬಂದಿ ಕೆಲಸ ಮಾಡಬೇಕು ಎಂದು ಸೂಚಿಸಲಾಗಿದೆ. ಮಂಗಳೂರು ಒಳ್ಳೆಯ ನಗರವಾಗಿದ್ದು, 10 ವರ್ಷಗಳ ಹಿಂದೆ ಇಲ್ಲಿ ಪ್ರೊಬೆಷನರಿ ಅಧಿಕಾರಿಯಾಗಿ ಕೆಲಸ ಮಾಡಿದ್ದೆ ಎಂದರು. ಕುಲದೀಪ್ ಜೈನ್ ಅವರು 2011ನೇ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿದ್ದಾರೆ.

ಮಂಗಳೂರಿನ ಜನರು ಸಹಕಾರ ನೀಡಬೇಕು, ಸಂಚಾರ ನಿಯಮವನ್ನು ಪಾಲಿಸಬೇಕು ಎಂದು‌ ವಿನಂತಿಸಿದರು. ಮಂಗಳೂರು ನಗರ ಪೊಲೀಸ್ ಕಮಿಷನರ್ ಆಗಿದ್ದ ಎನ್. ಶಶಿಕುಮಾರ್ ಅವರನ್ನು ರೈಲ್ಚೆ ಡಿಐಜಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT