ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರಿ ಮಳೆ: ನಾಳೆಯಿಂದ ಕುಮಾರ ಪರ್ವತ ಚಾರಣ ಸ್ಥಗಿತ

Published 1 ಅಕ್ಟೋಬರ್ 2023, 14:30 IST
Last Updated 1 ಅಕ್ಟೋಬರ್ 2023, 14:30 IST
ಅಕ್ಷರ ಗಾತ್ರ

ಪ್ರಜಾವಾಣಿ ವಾರ್ತೆ

ಸುಬ್ರಹ್ಮಣ್ಯ (ದಕ್ಷಿಣ ಕನ್ನಡ): ಇಲ್ಲಿನ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಹಿಂಭಾಗದಲ್ಲಿರುವ  ಕುಮಾರಪರ್ವತದ ಚಾರಣಕ್ಕೆ ಅ.3ರಿಂದ ನಿರ್ಬಂಧ ವಿಧಿಸಲಾಗಿದೆ.

ಹವಾಮಾನ ಇಲಾಖೆಯು ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಿದ್ದು, ಈ ಭಾಗದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಮುಂದಿನ ಆದೇಶದವರೆಗೆ ಚಾರಣ ನಿಷೇಧಿಸಲಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಮೇ ತಿಂಗಳಿನಿಂದ ಸೆ.29ರವರೆಗೆ ಅರಣ್ಯ ಇಲಾಖೆಯು ಕುಮಾರಪರ್ವತ ಚಾರಣಕ್ಕೆ ನಿರ್ಬಂಧ ವಿಧಿಸಿತ್ತು. ಶನಿವಾರದಿಂದ ನಿರ್ಬಂಧ ತೆರವುಗೊಳಿಸಿ ಚಾರಣಕ್ಕೆ ಅವಕಾಶ ನೀಡಿದ್ದರಿಂದ ಶನಿವಾರ, ಭಾನುವಾರ ಭಾರಿ ಸಂಖ್ಯೆಯಲ್ಲಿ ಚಾರಣಿಗರು ಬಂದಿದ್ದರು. ಭಾರಿ ಮಳೆಯಿಂದಾಗ ಚಾರಣ ಕಷ್ಟವಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT