ಬುಧವಾರ, ಮಾರ್ಚ್ 22, 2023
32 °C

ಪ್ರಶಾಂತ್ ಸಿ.ಕೆ.ಗೆ ಕುಂದೇಶ್ವರ ಸಮ್ಮಾನ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಂಗಳೂರು: ಕಾರ್ಕಳ ಹಿರ್ಗಾನ ಕ್ಷೇತ್ರದಿಂದ ಪ್ರತಿ ವರ್ಷ ನೀಡಲಾಗುವ ಶ್ರೀ ಕುಂದೇಶ್ವರ ಸಮ್ಮಾನ್‌ ಪ್ರಶಸ್ತಿಗೆ ಯಕ್ಷ ಕಲಾವಿದ  ಪ್ರಶಾಂತ್‌ ಸಿ.ಕೆ. ಆಯ್ಕೆಯಾಗಿದ್ದಾರೆ.

‘ಯಕ್ಷಗಾನ ವೃತ್ತಿಪರ ಮೇಳದಲ್ಲಿ ಹಾಸ್ಯ ಕಲಾವಿದರಾಗಿರುವ ಪ್ರಶಾಂತ್‌  ಅವರು, ಅನೇಕ ಯಕ್ಷಗಾನ ಪ್ರಸಂಗ, ತುಳು ನಾಟಕಗಳನ್ನು ರಚಿಸಿದ್ದಾರೆ. ಕಾಂತಾರ ಸಿನಿಮಾದಲ್ಲೂ ನಟಿಸಿದ್ದಾರೆ. ಯಕ್ಷಗಾನ ಆಧರಿತ ವದನ ಕಲಾತ್ಮಕ ಚಿತ್ರದಲ್ಲಿ ಪ್ರಧಾನ ಭೂಮಿಕೆಯಲ್ಲಿದ್ದಾರೆ. ರಾಷ್ಟ್ರಪ್ರಶಸ್ತಿ ವಿಜೇತ ಪಿಂಗಾರ ಸಿನಿಮಾದಲ್ಲಿ ದೈವ ಪಾತ್ರವನ್ನು ನಿರ್ವಹಿಸಿದ್ದಾರೆ. ಟಿವಿ ವಾಹಿನಿಗಳ ಹಾಸ್ಯ ಸರಣಿಗಳಲ್ಲಿ ಭಾಗವಹಿಸಿದ್ದಾರೆ. ಯಕ್ಷ ರಸ ಮೊದಲಾದ ಹಾಸ್ಯ ಯಕ್ಷಗಾನ ಪ್ರಸಂಗಗಳನ್ನು ನಿರ್ದೇಶಿಸಿ ಅಭಿನಯಿಸುತ್ತಿದ್ದಾರೆ. ತುಳು ರಂಗಭೂಮಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ.’

‘ಇದೇ 21ರಂದು ನಡೆಯುವ ಶ್ರೀ ಕುಂದೇಶ್ವರ ಜಾತ್ರೆಯ ಸಂದರ್ಭ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಅಂದು ರಾತ್ರಿ 7 ಗಂಟೆಗೆ ಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ ‘ಹಿರಣ್ಯಾಕ್ಷ ಹಿರಣ್ಯ ಕಶಿಪು’ ತುಳು ಮತ್ತು ಕನ್ನಡ ಯಕ್ಷಗಾನ ಹಾಗೂ ‘ಮಾಯದಪ್ಪೆ ಮಂತ್ರದೇವತೆ’ ತುಳು ನಾಟಕ ಪ್ರದರ್ಶನ ಏರ್ಪಡಿಸಲಾಗಿದೆ. ಜ.22ರಂದು ವರ್ಷಾವಧಿ ಮಹೋತ್ಸವ, ಅನ್ನಸಂತರ್ಪಣೆ, ನೇಮೋತ್ಸವ ನಡೆಯಲಿದೆ' ಎಂದು ಕ್ಷೇತ್ರದ ಸಾಂಸ್ಕೃತಿಕ ಕಾರ್ಯಕ್ರಮ ಸಂಯೋಜಕ ಜಿತೇಂದ್ರ ಕುಂದೇಶ್ವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು