ಭಾನುವಾರ, 26 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾತಾಳ ವೆಂಕಟರಮಣ ಭಟ್‌ಗೆ ಕುರಿಯ ವಿಠಲಶಾಸ್ತ್ರಿ ಪ್ರಶಸ್ತಿ

Published 25 ಏಪ್ರಿಲ್ 2024, 4:07 IST
Last Updated 25 ಏಪ್ರಿಲ್ 2024, 4:07 IST
ಅಕ್ಷರ ಗಾತ್ರ

ಉಜಿರೆ: ಧರ್ಮಸ್ಥಳ ಯಕ್ಷಗಾನ ಮಂಡಳಿಯ ಹಿರಿಯ ಸ್ತ್ರೀ ವೇಷಧಾರಿ 91 ವರ್ಷದ ಪಾತಾಳ ವೆಂಕಟರಮಣ ಭಟ್ ಅವರಿಗೆ ಏ.26ರಮದು ಉಪ್ಪಿನಂಗಡಿಯ ಪಾತಾಳದ ದುರ್ಗಾಗಿರಿ ಭಜನಾ ಮಂದಿರದಲ್ಲಿ ಸುಂಕದಕಟ್ಟೆ ಮೇಳದ ವೇದಿಕೆಯಲ್ಲಿ ಕುರಿಯ ವಿಠಲಶಾಸ್ತ್ರಿ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದು ಎಂದು ಉಜಿರೆಯ ಕುರಿಯ ವಿಠಲಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನದ ಸಂಚಾಲಕ ಹಾಗೂ ಹವ್ಯಾಸಿ ಯಕ್ಷಗಾನ ಕಲಾವಿದ ಉಜಿರೆ ಅಶೋಕ ಭಟ್ ತಿಳಿಸಿದ್ದಾರೆ.

ಬಸ್‌ನಡಿ ಬಿದ್ದುಮಹಿಳೆ ಸಾವು

ಉಜಿರೆ: ಧರ್ಮಸ್ಥಳ ಬಸ್ ನಿಲ್ದಾಣದಲ್ಲಿ ಬುಧವಾರ ಸುಬ್ರಹ್ಮಣ್ಯಕ್ಕೆ ಹೋಗುವ ಕೆಎಸ್‌ಆರ್‌ಟಿಸಿ ಬಸ್‌ನ ಚಕ್ರದಡಿ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಚಾಲಕ ಬಸ್‌ ಅನ್ನು ಹಿಂದಕ್ಕೆ ಚಲಾಯಿಸಿದಾಗ ಘಟನೆ ನಡೆದಿದೆ. ಮಹಿಳೆ ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದಿದ್ದರು. ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT