ಎನ್‌ಪಿಎಸ್ ಪಿಂಚಣಿ ರದ್ದತಿಗೆ ನೌಕರರಿಂದ ಮನವಿ

7

ಎನ್‌ಪಿಎಸ್ ಪಿಂಚಣಿ ರದ್ದತಿಗೆ ನೌಕರರಿಂದ ಮನವಿ

Published:
Updated:

ಪುತ್ತೂರು : ರಾಜ್ಯ ಸರ್ಕಾರಿ ನೌಕರರಿಗೆ ಸಮಸ್ಯೆಯಾಗುತ್ತಿರುವ ಎನ್ಪಿಎಸ್ ಪಿಂಚಣಿ ಪದ್ಧತಿಯನ್ನು ರದ್ದುಗೊಳಿಸಿ ಹಳೆಯ ಪಿಂಚಣಿ ಪದ್ಧತಿಯನ್ನೇ ಜಾರಿಗೊಳಿಸಬೇಕೆಂದು ಆಗ್ರಹಿಸಿ ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘದ ಪದಾಧಿಕಾರಿಗಳು ನೈರುತ್ಯ ಶಿಕ್ಷಕರ ಕ್ಷೇತ್ರದ ನೂತನ ವಿಧಾನ ಪರಿಷತ್ ಸದಸ್ಯ ಭೋಜೇಗೌಡ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಪುತ್ತೂರಿನಲ್ಲಿ ಭಾನುವಾರ ಪ್ರೌಢ ಶಾಲಾ ಸಹ ಶಿಕ್ಷಕರ ಸಂಘ , ರಾಜ್ಯ ಎನ್‌ಪಿಎಸ್ ನೌಕರರ ಸಂಘ ಹಾಗೂ ಇತರ ಸಕರ್ಾರಿ ನೌಕರರ ಸಂಘಟನೆಗಳ ವತಿಯಿಂದ ನೈರುತ್ಯ ಶಿಕ್ಷಕರ ಕ್ಷೇತ್ರದ ನೂತನ ವಿಧಾನ ಪರಿಷತ್ ಸದಸ್ಯ ಬೋಜೇಗೌಡ ಅವರಿಗೆ ಹಮ್ಮಿಕೊಳ್ಳಲಾದ ಅಭಿನಂದನಾ ಸಮಾರಂಭದಲ್ಲಿ  ಸಂಘದದ ಜಿಲ್ಲಾ ಘಟಕ ಮತ್ತು ಪುತ್ತೂರು ತಾಲ್ಲೂಕು ಘಟಕಗಳ ವತಿಯಿಂದ ಜಿಲ್ಲಾಧ್ಯಕ್ಷ ಇಬ್ರಾಹಿಂ ಅವರು ನೌಕರರಿಗೆ ಹಳೆಯ ಪಿಂಚಣಿ ಪದ್ಧತಿಯನ್ನೇ ಮರು ಜಾರಿಗೊಳಿಸಬೇಕೆಂದು ಆಗ್ರಹಿಸಿ ಮನವಿ ಪತ್ರ ಸಲ್ಲಿಸಿದರು.

ನೌಕರರ ಕಷ್ಟಗಳಿಗೆ ಸ್ಪಂದಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು  ಭೋಜೇ ಗೌಡ ಭರವಸೆ ನೀಡಿದರು. ರಾಜ್ಯ ಸಕರ್ಾರಿ ಎನ್ಪಿಎಸ್ ನೌಕರರ ಸಂಘದ ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಯತೀಶ್ಕುಮಾರ್, ವಿದ್ಯಾಧರ್ ರೈ, ತಾಲ್ಲೂಕು ಘಟಕದ ಅಧ್ಯಕ್ಷ ದಿನೇಶ್ ಮಾಚಾರ್, ಕಾರ್ಯದರ್ಶಿ ವಿಮಲ್‌ಕುಮಾರ್  ಇದ್ದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !