ಬುಧವಾರ, ಸೆಪ್ಟೆಂಬರ್ 22, 2021
24 °C
ಅಗ್ನಿಶಾಮಕ ದಳದಿಂದ ರಕ್ಷಣಾ ಕಾರ್ಯ

ಮಂಗಳೂರು: ಡಿಸಿ ಕಚೇರಿಯ ಲಿಫ್ಟ್‌ನಲ್ಲಿ ಸಿಲುಕಿದ ಮಹಿಳೆಯ ರಕ್ಷಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಡಿಸಿ ಕಚೇರಿಯ ಲಿಫ್ಟ್‌ನಲ್ಲಿ ಸಿಲುಕಿದ ಮಹಿಳೆಯನ್ನು ರಕ್ಷಿಸಲು ಅಗ್ನಿಶಾಮಕ‌ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು

ಮಂಗಳೂರು: ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯ ಲಿಫ್ಟ್‌ನಲ್ಲಿ ಮಹಿಳೆಯೊಬ್ಬರು ಸಿಲುಕಿದ ಘಟನೆ ಸೋಮವಾರ ಬೆಳಿಗ್ಗೆ ನಡೆದಿದೆ.

ಜಿಲ್ಲಾಧಿಕಾರಿ ಕಚೇರಿಯ ಸಿಬ್ಬಂದಿ ವಾಣಿ ಲಿಫ್ಟ್ ನಲ್ಲಿ ತೆರಳಿವಾಗ ದಿಢೀರ್‌ನೇ ಸ್ಥಗಿತಗೊಂಡಿದೆ. ನಂತರ ವಿಷಯ ಅಗ್ನಿಶಾಮಕ‌ ದಳದ ಪಾಂಡೇಶ್ವರ ಠಾಣೆಗೆ ಮುಟ್ಟಿದೆ.

ಕೂಡಲೇ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ, ಸ್ಪ್ರೆಡ್ಡರ್ ಯಂತ್ರ ಬಳಸಿ ಲಿಫ್ಟ್‌ನ ಬಾಗಿಲನ್ನು ಕತ್ತರಿಸಿದ್ದಾರೆ. 30 ನಿಮಿಷಗಳ ಕಾರ್ಯಾಚರಣೆ ನಂತರ ಲಿಫ್ಟ್‌ನಲ್ಲಿ ಸಿಲುಕಿದ್ದ ಮಹಿಳೆಯನ್ನು ಯಶಸ್ವಿಯಾಗಿ ರಕ್ಷಿಸಲಾಯಿತು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು