ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಖ್ಯಪ್ರಾಣ ದೇವಸ್ಥಾನದ ಕೆರೆ ನವೀಕರಣ ಆರಂಭ

Last Updated 12 ಜೂನ್ 2022, 5:44 IST
ಅಕ್ಷರ ಗಾತ್ರ

ಮಂಗಳೂರು: ನಗರದಲ್ಲಿ ಜೀರ್ಣಾವಸ್ಥೆಯಲ್ಲಿದ್ದ ಅನೇಕ ಕೆರೆಗಳನ್ನು ಅಭಿವೃದ್ಧಿಪಡಿಸಲಾಗಿದ್ದು ಇನ್ನಷ್ಟು ಕೆರೆಗಳ ಅಭಿವೃದ್ಧಿಗೆ ಯೋಜನೆ ರೂಪಿಸಲಾಗಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ತಿಳಿಸಿದರು.

ಮಂಗಳೂರು ಮಹಾನಗರ ಪಾಲಿಕೆಯ ಸೆಂಟ್ರಲ್ ವಾರ್ಡಿನ ಬಜಿಲಕೇರಿ ಶ್ರೀ ಮುಖ್ಯಪ್ರಾಣ ದೇವಸ್ಥಾನದ ಕೆರೆಯ ನವೀಕರಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು ಧಾರ್ಮಿಕತೆಯ ಭಾಗವಾಗಿರುವ ಪುರಾತನ ಕೆರೆಗಳನ್ನು ಅಭಿವೃದ್ಧಿಪಡಿಸಿ ಸಂರಕ್ಷಿಸಬೇಕಾಗಿದೆ ಎಂದರು.

ನಗರದಲ್ಲಿ ಅನೇಕ ಕೆರೆಗಳು ದಾಖಲೆಯಲ್ಲಿ ಮಾತ್ರ ಉಳಿದಿದೆ. ಅಂತಹ ಕೆರೆಗಳನ್ನು ಹಂತಹಂತವಾಗಿ ಅಭಿವೃದ್ಧಿಪಡಿಸಲಾಗುವುದು. ಇದಕ್ಕೆ ಸ್ಥಳೀಯರು ಕೈಜೋಡಿಬೇಕು ಎಂದು ಅವರು ಸಲಹೆ ನೀಡಿದರು.

ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರವಿಶಂಕರ್ ಮಿಜಾರ್ ಮಾತನಾಡಿ, ಪ್ರಾಧಿಕಾರದಿಂದ ಕೆರೆ ಹಾಗೂ ಪಾರ್ಕ್ ಅಭಿವೃದ್ಧಿಗೆ ಪ್ರತ್ಯೇಕ ಯೋಜನೆ ರೂಪಿಸಲಾಗಿದೆ. ವಿವಿಧ ಕೆರೆಗಳ ಅಭಿವೃದ್ಧಿ ಆಗುತ್ತಿದೆ. ಉದ್ಯಾನಗಳ ಅಭಿವೃದ್ಧಿ ಕಾಮಗಾರಿಯನ್ನು ಶೀಘ್ರದಲ್ಲೇ ಕೈಗೆತ್ತಿಕೊಳ್ಳಲಾಗುವುದು ಎಂದು ತಿಳಿಸಿದರು‌.

ಪಾಲಿಕೆ ಸದಸ್ಯೆ ಪೂರ್ಣಿಮಾ, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಭಾಸ್ಕರ್, ಶ್ರೀ ಮುಖ್ಯಪ್ರಾಣ ದೇವಸ್ಥಾನದ ಅರ್ಚಕ ಗುರುರಾಜ್ ಭಟ್, ಮುಖಂಡರಾದ ಮುರಳೀಧರ ನಾಯಕ್, ರಮೇಶ್ ಹೆಗ್ಡೆ, ಪೂರ್ಣಿಮಾ ರಾವ್, ಚಂದ್ರಕಾಂತ್ ನಾಯಕ್, ವಿಕ್ರಂ ರಾವ್, ಗಣೇಶ್ ನಾಯಕ್, ಕೇದಾರ್, ಗಿರೀಶ್ ಕುಮಾರ್, ಸೌಮ್ಯಾ ರೈ, ಪಿ.ಸಿ ಗುರು, ಪ್ರಮೋದ್ ಆಚಾರ್ಯ, ಹರಿಪ್ರಸಾದ್, ಅಮರ್, ವಸಂತ ಪೂಜಾರಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT