ಭಾನುವಾರ, ನವೆಂಬರ್ 27, 2022
21 °C

ಹಣತೆ ವ್ಯಾಪಾರಿ ಕೊಲೆ: ಮತ್ತೊಬ್ಬನ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಹಣತೆ ವ್ಯಾಪಾರಕ್ಕಾಗಿ ನಗರಕ್ಕೆ ಬಂದಿದ್ದ ತಮಿಳುನಾಡಿನ ಸೇಲಂ ನಿವಾಸಿ ಮಾಯವೇಳ್ ಪೆರಿಯಸಾಮಿ (52) ಎಂಬುವವರನ್ನು ಹಣದ ಆಸೆಗಾಗಿ ಕೊಲೆಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಮತ್ತೊಬ್ಬ ಆರೋಪಿ ಮೂರ್ತಿ (45) ಎಂಬಾತನನ್ನು ಬಂದರು ಪೊಲೀಸರು ಗುರುವಾರ ಬಂಧಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಬಂಧಿಸಿರುವ ಹೂವಿನ ಹಡಗಲಿಯ ರವಿ ಯಾನೆ ವಕೀಲ್ ನಾಯ್ಕ ಎಂಬಾತ ನೀಡಿದ ಮಾಹಿತಿ ಆಧರಿಸಿ, ಮೂರ್ತಿಯನ್ನು ಬಂಧಿಸಲಾಗಿದೆ. ರವಿಯ ಜೊತೆ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಮೂರ್ತಿ ಕೂಡ ಈ ಕೊಲೆ ಕೃತ್ಯದಲ್ಲಿ ಭಾಗಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಮಾಯಾವೇಳ್ ಪೆರಿಯಸಾಮಿ ಬಳಿ ಸಾಕಷ್ಟು ಹಣವಿರಬಹುದು ಎಂದು ಭಾವಿಸಿದ್ದ ಆರೋಪಿ ರವಿ, ಮದ್ಯಸೇವಿಸಿ ಬಂಗ್ರಕುಳೂರಿನ ಮೈದಾನಕ್ಕೆ ಕರೆದೊಯ್ದು ಕೊಲೆಗೈದಿದ್ದ ಎನ್ನಲಾಗಿದ್ದು, ಕೃತ್ಯ ನಡೆದ 45 ದಿನಗಳ ಬಳಿಕ ಮೃತದೇಹ ಪತ್ತೆಯಾಗಿತ್ತು.
 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.