ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಳೂರು: ಕೊಂಕಣಿ ಭವನಕ್ಕೆ ಜಾಗ ಮಂಜೂರು, ಶಾಸಕ ವೇದವ್ಯಾಸ ಕಾಮತ್ ಭರವಸೆ

ಗೌರವ ಪ್ರಶಸ್ತಿ ಪ್ರದಾನ ಮಾಡಿದ ಶಾಸಕ ವೇದವ್ಯಾಸ ಕಾಮತ್
Last Updated 1 ಆಗಸ್ಟ್ 2021, 15:26 IST
ಅಕ್ಷರ ಗಾತ್ರ

ಮಂಗಳೂರು: ಕೊಂಕಣಿ ಭವನ ನಿರ್ಮಾಣಕ್ಕಾಗಿ ನಗರದ ಉರ್ವದಲ್ಲಿ 37 ಸೆಂಟ್ಸ್ ಜಾಗ ಮಂಜೂರಾಗಿದೆ. ಒಂದು ವಾರದೊಳಗೆ ಅದರ ಪಹಣಿಪತ್ರ ಲಭ್ಯವಾಗಲಿದೆ ಎಂದುಶಾಸಕ‌ ವೇದವ್ಯಾಸ ಕಾಮತ್ ಭರವಸೆ ನೀಡಿದರು.

ಭಾನುವಾರ ಇಲ್ಲಿ ಆಯೋಜಿಸಿದ್ದ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ 2020ನೇ ಸಾಲಿನ ಗೌರವ ಪ್ರಶಸ್ತಿ ಪ್ರದಾನ ಮತ್ತು ಪುಸ್ತಕ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕೊಂಕಣಿ ಭವನ ನಿರ್ಮಾಣಕ್ಕಾಗಿ ಈ ಹಿಂದೆ ಮಂಜೂರಾಗಿದ್ದ 30 ಸೆಂಟ್ಸ್ ಜಮೀನಿನ ಬಗ್ಗೆ ತಕರಾರು ಕೇಳಿ ಬಂದಿತ್ತು. ಹೀಗಾಗಿ ಅದರ ಸಮೀಪದಲ್ಲೇ ಇರುವ 37 ಸೆಂಟ್ಸ್ ಜಮೀನನ್ನು ಕೊಂಕಣಿ ಭವನಕ್ಕೆ ಮಂಜೂರು ಮಾಡಲಾಗಿದೆ. ಭವನ ನಿರ್ಮಾಣಕ್ಕಾಗಿ ಈಗಾಗಲೇ ₹ 3 ಕೋಟಿ ಬಿಡುಗಡೆಯಾಗಿದೆ. ಶೀಘ್ರದಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿ ಆರಂಭಿಸಲಾಗುವುದು ಎಂದರು.

ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್, ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲ್‌ ಸಾರ್, ಬ್ಯಾರಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷ ರಹೀಂ ಉಚ್ಚಿಲ್, ಮೇಯರ್ ಪ್ರೇಮಾನಂದ ಶೆಟ್ಟಿ, ಕೊಂಕಣಿ ಚಲನಚಿತ್ರ ನಟ, ಸಾಹಿತಿ ಹೆನ್ರಿ ಡಿಸಿಲ್ವಾ ಮಾತನಾಡಿದರು. ಕೊಂಕಣಿ ಅಕಾಡೆಮಿ ಅಧ್ಯಕ್ಷ ಡಾ ಕೆ. ಜಗದೀಶ್ ಪೈ ಅಧ್ಯಕ್ಷತೆ ವಹಿಸಿದ್ದರು.

ಅಕಾಡೆಮಿ ಸದಸ್ಯ ಅರವಿಂದ ಜಿ. ಶೇಟ್ ಸ್ವಾಗತಿಸಿದರು. ರಿಜಿಸ್ಟ್ರಾರ್ ಮನೋಹರ್ ಕಾಮತ್ ವಂದಿಸಿದರು. ಸದಸ್ಯ ಕೆನ್ಯೂಟ್ ಜೀವನ್ ಪಿಂಟೊ ಕಾರ್ಯಕ್ರಮ ನಿರೂಪಿಸಿದರು.

ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ

ಅರುಣ್ ಸುಬ್ರಾವ್ ಉಭಯಕರ್ (ಸಾಹಿತ್ಯ), ಪುತ್ತೂರು ಪಾಂಡುರಂಗ ನಾಯಕ್ (ಕಲೆ), ಲಕ್ಷ್ಮಿ ಕೃಷ್ಣ ಸಿದ್ದಿ (ಜಾನಪದ) ಅವರಿಗೆ ಅಕಾಡೆಮಿಯ ಗೌರವ ಪ್ರಶಸ್ತಿ ಹಾಗೂ ಪ್ರೇಮ್ ಮೊರಾಸ್ (ಕವನ-‘ಏಕ್‌ಮೂಟ್ ಪಾವ್ಳೊ’) ಮತ್ತು ಸ್ಟೀವನ್ ಕ್ವಾಡ್ರಸ್ ಪೆರ್ಮುದೆ (ಲೇಖನ-‘ಸುಗಂದು ಸ್ವಾಸ್’) ಅವರಿಗೆ ಪುಸ್ತಕ ಬಹುಮಾನ ನೀಡಲಾಯಿತು. ಮೋನಿಕಾ ಡೇಸಾ (ಸಣ್ಣಕತೆ-‘ನವಿದಿಶಾ’) ಅವರ ಅನುಪಸ್ಥಿತಿಯಲ್ಲಿ ಅವರ ಸಹೋದರ ರಿಚಾರ್ಡ್ ಡೆಸಾ ಪುಸ್ತಕ ಬಹುಮಾನ ಸ್ವೀಕರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT