ಶುಕ್ರವಾರ, ಜುಲೈ 30, 2021
23 °C

ಮಂಗಳೂರು: ನಿರ್ಮಾಣ ಕಾಮಗಾರಿ ವೇಳೆ ಗುಡ್ಡ ಕುಸಿತ: ಕಾರ್ಮಿಕ ಪಾರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ತಾಲ್ಲೂಕಿನ ಮುತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರ್ಗದಂಗಡಿ-ನೋಣಾಲ್‌ನ ರಸ್ತೆ ಬದಿಯ ತಡೆಗೋಡೆ ನಿರ್ಮಾಣ ಕಾಮಗಾರಿ ವೇಳೆ ಭಾನುವಾರ ಗುಡ್ಡ ಕುಸಿದ ಪರಿಣಾಮ ಕಾರ್ಮಿಕ ರಾಜೇಶ ಪೂಜಾರಿ (28) ಮಣ್ಣಿನಡಿ ಸಿಲುಕಿದ್ದರು.

ತಕ್ಷಣ ಜೆಸಿಬಿ ಮೂಲಕ ಮಣ್ಣು ತೆರವುಗೊಳಿಸಲಾಯಿತು. ಎರಡು ಗಂಟೆ ಕಾರ್ಯಾಚರಣೆ ನಡೆಸಿ, ರಾಜೇಶ್ ಅವರನ್ನು ಮಣ್ಣಿನಿಂದ ಮೇಲೆತ್ತಲಾಯಿತು.

ಕೆಲವು ದಿನಗಳಿಂದ ಸತತವಾಗಿ ಸುರಿಯುತ್ತಿರುವ ಮಳೆಗೆ ಗುಡ್ಡ ಕುಸಿತವಾಗಿದ್ದು, ಮತ್ತಷ್ಟು ಅಪಾಯ ಸಂಭವಿಸುವ ಮುನ್ನ ಜನಪ್ರತಿನಿಧಿಗಳು, ಅಧಿಕಾರಿಗಳು ಗಮನಹರಿಸಬೇಕು ಎಂದು ಸಾರ್ವಜನಿಕರು ವಿನಂತಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು