ಗುರುವಾರ , ಮಾರ್ಚ್ 30, 2023
31 °C
ಕಾನೂನು ಮಾಹಿತಿ ಕಾರ್ಯಕ್ರಮದಲ್ಲಿ ನ್ಯಾಯಾಧೀಶ ನಾಗೇಶ್‌ಮೂರ್ತಿ

ಆಸ್ತಿ ನೋಂದಣಿಗೆ 11ಇ ನಕ್ಷೆ ಅಗತ್ಯವಿಲ್ಲ: ನ್ಯಾಯಾಧೀಶ ನಾಗೇಶ್‌ಮೂರ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಜಿರೆ: ‘ಆಸ್ತಿ ನೋಂದಣಿಗೆ 11 ಇ ನಕ್ಷೆ ಅಗತ್ಯವಿಲ್ಲ ಎಂದು ಹೈಕೋರ್ಟ್‌ ತೀರ್ಪು ನೀಡಿದೆ’ ಎಂದು ಬೆಳ್ತಂಗಡಿ ನ್ಯಾಯಾಲಯದ ಪ್ರಧಾನ ಸಿವಿಲ್ ನ್ಯಾಯಾಧೀಶ ನಾಗೇಶ್ ಮೂರ್ತಿ ಬಿ.ಕೆ. ಹೇಳಿದರು.

ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ಬೆಳ್ತಂಗಡಿ ತಾಲ್ಲೂಕು ಘಟಕದ ನೇತೃತ್ವದಲ್ಲಿ ಸುಲ್ಕೇರಿ ಗ್ರಾಮ ಪಂಚಾಯಿತಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ತಾಲ್ಲೂಕು ಕಾನೂನು ಸೇವೆಗಳ ಸಮಿತಿ ಮತ್ತು ವಕೀಲರ ಸಂಘದ ಸಂಯುಕ್ತ ಆಶ್ರಯದಲ್ಲಿ ಸೋಮವಾರ ಸುಲ್ಕೇರಿಯಲ್ಲಿ ನಡೆದ ಕಾನೂನು ಮಾಹಿತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಕಾನೂನಿನ ಬಗ್ಗೆ ಅರಿವು ಅಗತ್ಯ. ಕಾನೂನಿನ ಅರಿವು ಇದ್ದಾಗ ನಮ್ಮ ಹಕ್ಕು ಮತ್ತು ಕರ್ತವ್ಯಗಳ ಬಗ್ಗೆ ತಿಳುವಳಿಕೆ ಉಂಟಾಗುತ್ತದೆ’ ಎಂದರು.

ಪ್ರಧಾನ ಸಿವಿಲ್ ನ್ಯಾಯಾಧೀಶ ಸತೀಶ್ ಕೆ.ಜಿ. ಮಾತನಾಡಿ, ‘ಎಲ್ಲರೂ ಗೌರವ ಹಾಗೂ ಘನತೆಯಿಂದ ಬದುಕಲು ಎಲ್ಲರಿಗೂ ಸಮಾನ ನ್ಯಾಯ ನೀಡಲಾಗುತ್ತದೆ. ಆರ್ಥಿಕ ಭದ್ರತೆ, ಆರೋಗ್ಯ ರಕ್ಷಣೆಯೊಂದಿಗೆ ತೃಪ್ತಿಕರ ಜೀವನ ನಡೆಸಲು ಎಲ್ಲರಿಗೂ ಸಮಾನ ಅವಕಾಶವಿದೆ’ ಎಂದರು.

ವಕೀಲರ ಸಂಘದ ಅಧ್ಯಕ್ಷ ಪ್ರಸಾದ್ ಕೆ.ಎಸ್. ಸುಲ್ಕೇರಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ನಾರಾಯಣ ಪೂಜಾರಿ, ವಸಂತ ಪೂಜಾರಿ, ಮಮ್ತಾಜ್ ಬೇಗಂ ಮತ್ತು ಶೈಲೇಶ್ ಠೋಸರ್ ಇದ್ದರು. ನಿವೃತ್ತ ನೌಕರರ ಸಂಘದ ಅಧ್ಯಕ್ಷ ಬಿ. ವಿಠಲ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.
ವಕೀಲ ಸುಬ್ರಹ್ಮಣ್ಯ ಅಗರ್ತ, ನವಾಜ್ ಶರೀಫ್ ಮಾತನಾಡಿದರು. ಪದ್ಮಕುಮಾರ್ ಸ್ವಾಗತಿಸಿದರು. ನಿವೃತ್ತ ಶಿಕ್ಷಕ ವಸಂತ ರಾವ್ ವಂದಿಸಿದರು. ವಿಶ್ವನಾಥ ಶೆಟ್ಟಿ ನಿರೂಪಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು