ಮೂಲ್ಕಿ: ವಿದ್ಯಾರ್ಥಿಗಳಲ್ಲಿ, ಸಮಾಜದ ದುರ್ಬಲ ವರ್ಗಗಳಲ್ಲಿ ಸಮಾಜ ಕಲ್ಯಾಣ ಕಾಯ್ದೆ, ಭ್ರಷ್ಟಾಚಾರ ನಿರ್ಮೂಲನಾ ಕಾನೂನು, ಆಡಳಿತಾತ್ಮಕ ಕಾರ್ಯಕ್ರಮ, ನಾಗರಿಕನ ಹಕ್ಕು ಮತ್ತು ಸೌಲಭ್ಯಗಳ ಬಗ್ಗೆ, ಕಾನೂನಿನ ಅರಿವು ಮೂಡಿಸುವ ಪ್ರಯತ್ನ ಶಿಕ್ಷಣ ಸಂಸ್ಥೆಗಳಲ್ಲಿ ನಡೆಯಬೇಕು ಹಿರಿಯ ಸಿವಿಲ್ ನ್ಯಾಯಾಧೀಶೆ ಜೈಬುನ್ನೀಸಾ ಹೇಳಿದರು.

ಮೂಲ್ಕಿಯ ವಿಜಯಾ ಕಾಲೇಜಿನಲ್ಲಿ ಹಳೆಯಂಗಡಿಯ ‘ಭಾರತದ ಕಾನೂನು ನೆರವು ಘಟಕ’, ವಿಜಯ ಮಾಸ್ಟರ್ ಟ್ರಸ್ಟ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಂಯೋಜನೆಯಲ್ಲಿ ಭ್ರಷ್ಟಾಚಾರ ವಿರೋಧ ದಿನದ ಅಂಗವಾಗಿ ಹಮ್ಮಿಕೊಂಡಿದ್ದ ಕಾನೂನು ಮಾಹಿತಿ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಘಟಕದ ಅಧ್ಯಕ್ಷ ಡೇನಿಯಲ್ ದೇವರಾಜ್ ಅಧ್ಯಕ್ಷತೆ ವಹಿಸಿದ್ದರು.

ಮೂಲ್ಕಿ ಮುಖ್ಯ ಜಂಕ್ಷನ್ನಿಂದ ವಿಜಯ ಕಾಲೇಜಿನವರೆಗೆ ವಿದ್ಯಾರ್ಥಿಗಳು, ವಕೀಲರು, ಸಾರ್ವಜನಿಕರು ಜಾಥಾ ನಡೆಸಿದರು.

ಕಾಲೇಜಿನ ಪ್ರಾಂಶುಪಾಲ ಪ್ರೊ.ವೆಂಕಟೇಶ್ ಭಟ್, ಸಿಎಸ್ಐ ಚರ್ಚ್ನ ಸ್ಟೀವನ್ ಸರ್ವೋತ್ತಮ, ಐಸನ್ ಪಾಲನ್ನ, ಪಾಂಪೈ ಕಾಲೇಜಿನ ಪ್ರಾಂಶುಪಾಲ ಪುರುಷೋತ್ತಮ ಕೆ.ವಿ., ಮೂಲ್ಕಿಯ ಬಂಟರ ಸಂಘದ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ಉಜಿರೆಯ ರುಡ್ಸೆಡ್ನ ನಿರ್ದೇಶಕ ಎಂ.ಸುಬ್ರಾಯ ಪ್ರಭು ಭಾಗವಹಿಸಿದ್ದರು.

ಸಂಪನ್ಮೂಲ ವ್ಯಕ್ತಿಗಳಾಗಿ ಲೋಕಾಯುಕ್ತದ ಸುರೇಶ್ಕುಮಾರ್, ವಕೀಲರಾದ ರವೀಶ್ ಕಾಮತ್, ಸಬಿತಾ ಕೆ. ಕಿನ್ನಿಗೋಳಿ, ಕೆ.ಎಸ್.ಶೆಟ್ಟಿಗಾರ್ ಮಾಹಿತಿ ನೀಡಿದರು. ಉಪನ್ಯಾಸಕಿ ಶರ್ಮಿಳಾ ಕಾರ್ಯಕ್ರಮ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.