ಸಂಪುಟದಿಂದ ಈಶ್ವರಪ್ಪ ವಜಾ ಮಾಡಲಿ: ಸಿಎಂಗೆ ಡಿ.ಕೆ. ಶಿವಕುಮಾರ್ ಸವಾಲು

ಮಂಗಳೂರು: ಸಚಿವ ಸಂಪುಟದ ಹಿರಿಯ ಸಹೋದ್ಯೋಗಿ ಸರ್ಕಾರ ಯಾವ ರೀತಿ ನಡೆಯುತ್ತಿದೆ ಎಂಬುದರ ಬಗ್ಗೆ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ. ಒಂದು ವೇಳೆ ಯಡಿಯೂರಪ್ಪ ಅವರು ಸರಿಯಾಗಿ ಕೆಲಸ ಮಾಡುತ್ತಿದ್ದರೆ, ಕೂಡಲೇ ಈಶ್ವರಪ್ಪ ಅವರನ್ನು ಸಂಪುಟದಿಂದ ವಜಾ ಮಾಡಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸವಾಲು ಹಾಕಿದರು.
ಕೇರಳ ಚುನಾವಣಾ ಪ್ರಚಾರಕ್ಕೆ ತೆರಳುವ ಮಾರ್ಗಮಧ್ಯೆ ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿರಿಯ ಸಚಿವರೇ ಮುಖ್ಯಮಂತ್ರಿ ಮೇಲೆ ನಂಬಿಕೆ ಇಲ್ಲ ಎಂದು ಹೇಳಿದ್ದಾರೆ. ಈವರೆಗೂ ಯಾವ ಸಚಿವರೂ ಮುಖ್ಯಮಂತ್ರಿ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿರುವ ಉದಾಹರಣೆ ಇಲ್ಲ ಎಂದರು.
ಇದನ್ನೂ ಓದಿ: ಈಶ್ವರಪ್ಪ ಲೆಟರ್ ಬಾಂಬ್: ಯಡಿಯೂರಪ್ಪ ವಿರುದ್ಧ ರಾಜ್ಯಪಾಲ, ವರಿಷ್ಠರಿಗೆ ದೂರು
ಅಧಿಕಾರಿಗಳ ವರ್ಗಾವಣೆ ಆಗುತ್ತಿದೆ. ಅಧಿಕಾರಿಗಳ ಮೇಲೆ ಸರ್ಕಾರಕ್ಕೆ ಹಿಡಿತವಿಲ್ಲ. ಆಡಳಿತ ಯಂತ್ರ ಸಂಪೂರ್ಣ ಕುಸಿದಿದೆ ಎಂದ ಅವರು, ಮುಖ್ಯಮಂತ್ರಿ ಸರಿಯಾಗಿ ಆಡಳಿತ ನಡೆಸುತ್ತಿದ್ದರೆ, ಕೂಡಲೇ ಈಶ್ವರಪ್ಪ ಅವರನ್ನು ವಜಾ ಮಾಡಬೇಕು. ಇಲ್ಲವೇ ತಾವೇ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಇನ್ನಷ್ಟು...
ರಾಜ್ಯಪಾಲರು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ವಜಾಗೊಳಿಸಲಿ: ಸಿದ್ದರಾಮಯ್ಯ
ನೋಡಿ: ಯಡಿಯೂರಪ್ಪ ವಿರುದ್ಧ ಬಂಡೆದ್ದ ಈಶ್ವರಪ್ಪ- ಇದರ ಮರ್ಮವೇನು?
ಈಶ್ವರಪ್ಪ ರಾಜ್ಯಪಾಲರ ಅಂಗಳಕ್ಕೆ ಹೋಗಿದ್ದು ಸರಿಯಲ್ಲ: ಬಸವರಾಜ ಬೊಮ್ಮಾಯಿ
ನಾನು ರೆಬೆಲ್ ಅಲ್ಲ, ಪಕ್ಷಕ್ಕೆ ನಿಷ್ಠನಾಗಿದ್ದೇನೆ: ಈಶ್ವರಪ್ಪ
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.