ಪುತ್ತೂರು: ನಮ್ಮ ಬದುಕನ್ನು ನಿರ್ಧರಿಸುವುದು ಕೇವಲ ಅಂಕಗಳು ಮಾತ್ರವಲ್ಲ, ವ್ಯಕ್ತಿತ್ವದ ಪರಿಪೂರ್ಣತೆಯು ನಮ್ಮ ಸರ್ವಾಂಗೀಣ ಬೆಳವಣಿಗೆಯನ್ನು ಆಧರಿಸಿದೆ. ಜೀವನದಲ್ಲಿ ನಾವು ಸಾಗುವ ಹಾದಿಯು ಅಷ್ಟು ಸರಳವಾಗಿಲ್ಲ. ಸುಖದೊಂದಿಗೆ ಕಷ್ಟವು ಜತೆಗೂಡಿದಾಗ ಬದುಕಿಗೊಂದು ಮೆರುಗು ಸಿಗುತ್ತದೆ ಎಂದು ಮೂಡಬಿದಿರೆಯ ಆಳ್ವಾಸ್ ಫಾರ್ಮಸಿ ಶಿಕ್ಷಣ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗ್ರೀಷ್ಮ ವಿವೇಕ್ ಆಳ್ವ ಹೇಳಿದರು.

ನಗರದ ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಶನಿವಾರ ನಡೆದ ‘ವಿವೇಕ ಪ್ರದೀಪ್ತಿ’ ಸಾಧಕ ವಿದ್ಯಾರ್ಥಿಗಳ ಅಭಿನಂದನಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪ್ರ್ರತಿಯೊಬ್ಬ ವಿದ್ಯಾರ್ಥಿಯಲ್ಲಿಯೂ ಒಂದಲ್ಲ ಒಂದು ರೀತಿಯ ಪ್ರತಿಭೆ ಇದ್ದೆ ಇರುತ್ತದೆ. ವಿದ್ಯಾರ್ಥಿಯು ತನ್ನಲ್ಲಿರುವ ಅನನ್ಯ ಪ್ರತಿಭೆಯನ್ನು ಗುರುತಿಸಿ ಅದನ್ನು ಬೆಳೆಸುವುದರ ಕಡೆಗೆ ಗಮನಹರಿಸಿದಾಗ ಸಮಾಜ ಅವರನ್ನು ಗೌರವಿಸುತ್ತದೆ. ಪ್ರತಿಯೊಬ್ಬ ವಿದ್ಯಾರ್ಥಿಯ ಸಾಧನೆಯ ಹಿಂದೆ ಅವರ ತಂದೆ–ತಾಯಿಗಳ ಪ್ರೀತಿ, ವಾತ್ಸಲ್ಯ, ಗುರುಗಳ ಪ್ರಯತ್ನವಿರುತ್ತದೆ. ಯಾವಾಗ ವಿದ್ಯಾರ್ಥಿಗಳು ಅದನ್ನು ಅರ್ಥೈಸಿಕೊಂಡು ಇತರರನ್ನು ಗೌರವಿಸುತ್ತಾರೋ ಆಗ ಅವರ ಜೀವನ ಸಾರ್ಥಕವಾಗುತ್ತದೆ ಎಂದು ಹೇಳಿದರು.

ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ರವೀಂದ್ರ .ಪಿ ಮಾತನಾಡಿ, ನಮ್ಮ ದೇಶ ವಿಕಸಿತ ಭಾರತವಾಗಬೇಕಾದರೆ ಇಂದಿನ ಪೀಳಿಗೆ ಪ್ರಾಮಾಣಿಕವಾಗಿ ದೇಶಕ್ಕಾಗಿ ದುಡಿಯಲು ಸಿದ್ಧರಾಗಬೇಕು ಎಂದರು.

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುವ 362 ಮಂದಿ ವಿದ್ಯಾರ್ಥಿಗಳು ಹಾಗೂ ಸಿಇಟಿ, ಜೆಇಇ, ನೀಟ್ ಮತ್ತು ಸಿ.ಎ ಪರೀಕ್ಷೆಗಳಲ್ಲಿ ಅತ್ಯುನ್ನತ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಕೋಶಾಧಿಕಾರಿ ಸಚಿನ್ ಶೆಣೈ ಕೆ, ಪ್ರಾಂಶುಪಾಲ ದೇವಿಚರಣ್ರೈ ಎಂ ಮತ್ತಿತರರು ಉಪಸ್ಥಿತದ್ದರು. ಉಪನ್ಯಾಸಕ ಪರಮೇಶ್ವರ ಶರ್ಮ ಪಿ.ಕೆ ಸ್ವಾಗತಿಸಿದರು. ಉಪನ್ಯಾಸಕಿ ದೀಕ್ಷಿತಾ ಬಿ ವಂದಿಸಿದರು. ಉಪನ್ಯಾಸಕಿ ಮಮತಾ ಶೆಟ್ಟಿ.ಕೆ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.