ಭಾನುವಾರ, 16 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೈಫ್ ಸೇವಿಂಗ್ ಚಾಂಪಿಯನ್‌ಷಿಪ್‌: ಧನ್ವಿತ್ ಆಯ್ಕೆ

Published 23 ಮೇ 2024, 13:21 IST
Last Updated 23 ಮೇ 2024, 13:21 IST
ಅಕ್ಷರ ಗಾತ್ರ

ಪುತ್ತೂರು: ರಾಷ್ಟ್ರೀಯ ಲೈಫ್ ಸೇವಿಂಗ್ ಸೊಸೈಟಿ ನಡೆಸಿದ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದ ನಗರದ ನೆಲ್ಲಿಕಟ್ಟೆಯ ಅಂಬಿಕಾ ಪಿಯು ಕಾಲೇಜಿನ ದ್ವಿತೀಯ ಪಿಯು ವಿದ್ಯಾರ್ಥಿ ಧನ್ವಿತ್ ಅವರು ಲೈಫ್ ಸೇವಿಂಗ್ ವರ್ಲ್ಡ್‌ ಚಾಂಪಿಯನ್‌ಷಿಪ್‌ನ ಭಾರತ ತಂಡಕ್ಕೆ ಆಯ್ಕೆಯಾಗಿದ್ದಾರೆ.

ಲೈಫ್ ಸೇವಿಂಗ್ ವರ್ಲ್ಡ್‌ ಚಾಂಪಿಯನ್‌ಷಿಪ್ ಆಯ್ಕೆ ಪ್ರಕ್ರಿಯೆಯು ವಿಶಾಖಪಟ್ಟಣದಲ್ಲಿ ಮೇ 15ರಿಂದ 19ರವರೆಗೆ ನಡೆದಿತ್ತು.

ಆಸ್ಟ್ರೇಲಿಯಾದ ಕ್ವೀನ್ಸ್‌ಲ್ಯಾಂಡ್‌ನಲ್ಲಿ ಆಗಸ್ಟ್‌ನಲ್ಲಿ ನಡೆಯುವ ಸ್ಪರ್ಧೆಯಲ್ಲಿ ಭಾಗವಹಿಸಲಿರುವ ಧನ್ವಿತ್ ಅವರು ಪುತ್ತೂರಿನ ದರ್ಬೆಯ ಕೇಶವಕುಮಾರ್ ಕೆ., ಮೀನಾಕ್ಷಿ ದಂಪತಿ ಪುತ್ರ. ಪುತ್ತೂರಿನ ಬಾಲವನ ಈಜುಕೊಳದ ತರಬೇತುದಾರರಾದ ಪಾರ್ಥ ವಾರಣಾಸಿ, ರೋಹಿತ್ ಪಿ. ಹಾಗೂ ದೀಕ್ಷಿತ್ ಅವರ ಮಾರ್ಗದರ್ಶನದಲ್ಲಿ ಧನ್ವಿತ್ ತರಬೇತಿ ಪಡೆಯುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT