ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕಳೆಂಜ ರಸ್ತೆಯಲ್ಲಿ ವಿಜಯೋತ್ಸವದ ವೇಳೆ ಬೆದರಿಕೆ: ಶ್ರೀನಿವಾಸ ರಾವ್

Published 6 ಜೂನ್ 2024, 13:49 IST
Last Updated 6 ಜೂನ್ 2024, 13:49 IST
ಅಕ್ಷರ ಗಾತ್ರ

ಬೆಳ್ತಂಗಡಿ: ‘ಲೋಕಸಭಾ ಚುನಾವಣೆಯ ಫಲಿತಾಂಶ ಬಂದ ದಿನ ಕಳೆಂಜದ ಕುಶಾಲಪ್ಪ ಗೌಡ ಅವರ ಮನೆಯ 100 ಮೀ ಅಂತರದ ಆಸುಪಾಸಿನ ರಸ್ತೆಯಲ್ಲಿ ಬಿಜೆಪಿಯಿಂದ ವಿಜಯೋತ್ಸವ ಮಾಡಲಾಗಿದೆ. ಅಲ್ಲಿಗೆ ಕುಶಾಲಪ್ಪ ಗೌಡ ಏಕಾಏಕಿ ಬಂದು ಬೆದರಿಕೆ ಹಾಕಿ ರಾಜೇಶ್ ಅವರಿಗೆ ಜಾತಿ ನಿಂದನೆ, ಹಲ್ಲೆ ಮಾಡಿ ಕೊಲೆ ಪ್ರಯತ್ನ ನಡೆಸಿದ್ದಾರೆ. ಈ ಘಟನೆಯನ್ನು ಖಂಡಿಸುತ್ತೇವೆ’ ಎಂದು ಬಿಜೆಪಿಯ ಬೆಳ್ತಂಗಡಿ ಮಂಡಲದ ಅಧ್ಯಕ್ಷ ಶ್ರೀನಿವಾಸ ರಾವ್ ಹೇಳಿದರು.

ಗುರುವಾಯನಕೆರೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಹಲವು ಶಾಸಕರು ಸೇವೆ ಸಲ್ಲಿಸಿದ್ದು, ಉತ್ತಮ ರೀತಿಯಲ್ಲಿ ಸೇವಾ ಕಾರ್ಯ ನಡೆಸಿದ್ದಾರೆ. ಆದರೆ, 2023ರಿಂದ ತಾಲ್ಲೂಕಿನಲ್ಲಿ ಕೀಳುಮಟ್ಟದ ರಾಜಕೀಯ ನಡೆಯುತ್ತಿದೆ. ಕುಶಾಲಪ್ಪ ಗೌಡ ಅವರು ಕಾಂಗ್ರೆಸ್ ಕಾರ್ಯಕರ್ತನಾಗಿ ಕಳೆದ ವಿಧಾನ ಸಭಾ ಮತ್ತು ಲೋಕಸಭಾ ಚುನಾವಣೆಯಲ್ಲಿ ದುಡಿದಿದ್ದಾರೆ. ಅವರು ಕಾಂಗ್ರೆಸ್ ಕಾರ್ಯಕರ್ತ ಅಲ್ಲ ಎಂದು ಹೇಳುವುದು ಸುಳ್ಳು’ ಎಂದು ಅವರು ಆರೋಪಿದರು.

ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ಜಯಂತ ಕೋಟ್ಯಾನ್, ರಾಜ್ಯ ಸಮಿತಿ ಸದಸ್ಯ ಕೊರಗಪ್ಪ ನಾಯ್ಕ, ಬೆಳ್ತಂಗಡಿ ಮಂಡಲದ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ಜಯಾನಂದ ಗೌಡ, ಜಿಲ್ಲಾ ಕಾರ್ಯದರ್ಶಿ ವಸಂತಿ ಮಚ್ಚಿನ, ರಾಜೇಶ್ ಪೆಂರ್ಬುಡ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT