ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಳೂರು: ಐಎಸ್‌ ನಂಟು ಆರೋಪಿ ಮಾಝ್‌ ತಂದೆ ಮುನೀರ್‌ ಹೃದಯಾಘಾತದಿಂದ ಸಾವು

Last Updated 23 ಸೆಪ್ಟೆಂಬರ್ 2022, 15:43 IST
ಅಕ್ಷರ ಗಾತ್ರ

ಮಂಗಳೂರು: ನಿಷೇಧಿತ ಭಯೋತ್ಪಾದಕ ಸಂಘಟನೆ ಐಸಿಸ್ ಜೊತೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ನಗರದ ಮಾಝ್‌ ಮುನೀರ್‌ ಅಹಮದ್ ಅವರ ತಂದೆ ಮುನೀರ್‌ ಅಹಮದ್‌ (54) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾದರು.

ಆರ್ಯ ಸಮಾಜ ರಸ್ತೆ ಬಳಿಯ ಅಪಾರ್ಟ್‌ಮೆಂಟ್‌ ಸಮುಚ್ಚಯವೊಂದರಲ್ಲಿ ವಾಸವಿದ್ದ ಮುನೀರ್‌ ಮಗನ ಬಂಧನವಾದ ಬಳಿಕ ಮಾನಸಿಕವಾಗಿ ಆಘಾತಕ್ಕೊಳಗಾಗಿದ್ದರು. ಶುಕ್ರವಾರ ಮಧ್ಯಾಹ್ನ ಮನೆಯಲ್ಲಿ ಕುಸಿದುಬಿದ್ದಿದ್ದರು. ಅವರನ್ನು ತಕ್ಷಣವೇ ಫಾದರ್‌ ಮುಲ್ಲರ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಅವರು ಕೊನೆಯುಸಿರೆಳೆದರು ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.

ಮಾಝ್‌ ಸೆ.14ರಿಂದ ಕಾಣೆಯಾಗಿದ್ದಾನೆ ಎಂದು ಮುನೀರ್‌ ಅವರು ಅಂಚೆ ಮೂಲಕ ನಗರದ ಕದ್ರಿ ಪೊಲೀಸ್‌ ಠಾಣೆಗೆ ಸೋಮವಾರ ದೂರು ನೀಡಿದ್ದರು. ಮಾಝ್‌ನನ್ನು ಶಿವಮೊಗ್ಗ ಜಿಲ್ಲೆಯ ಪೊಲೀಸರು ಮಂಗಳವಾರ ಬಂಧಿಸಿದ್ದರು.

ಆರೋಪಿ ಮಾಝ್‌ ನಗರ ಬಂದರಿನಲ್ಲಿ ಹಾಗೂ ಕೋರ್ಟ್ ರಸ್ತೆಯ ಬಳಿ ‘‌ಲಷ್ಕರ್‌ ಎ ತಯ್ಯಬಾ ಹಾಗೂ ತಾಲಿಬಾನ್ ಪರ ಗೋಡೆಬರಹ ಬರೆದ ಪ್ರಕರಣದಲ್ಲಿ 2020ರ ನವೆಂಬರ್ 27ರಂದು ಬಂಧಿತನಾಗಿದ್ದ. ಆತನಿಗೆ 2021ರ ಸೆ. 8ರಂದು ಜಾಮೀನು ಸಿಕ್ಕಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT