ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿ.17ರಂದು ತಾಲ್ಲೂಕು 18ನೇ ಕನ್ನಡ ಸಾಹಿತ್ಯ ಸಮ್ಮೇಳನ

Published 11 ಡಿಸೆಂಬರ್ 2023, 14:06 IST
Last Updated 11 ಡಿಸೆಂಬರ್ 2023, 14:06 IST
ಅಕ್ಷರ ಗಾತ್ರ

ಬೆಳ್ತಂಗಡಿ: ‘ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಬೆಳ್ತಂಗಡಿ ತಾಲ್ಲೂಕು ಘಟಕದಿಂದ ತಾಲ್ಲೂಕು 18ನೇ ಕನ್ನಡ ಸಾಹಿತ್ಯ ಸಮ್ಮೇಳನವು ನಿವೃತ್ತ ಪ್ರಾಂಶುಪಾಲ ಎ.ಕೃಷ್ಣಪ್ಪ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ಡಿ.17ರಂದು ವಾಣಿ ಶಿಕ್ಷಣ ಸಂಸ್ಥೆ ಆವರಣದಲ್ಲಿ ನಡೆಯಲಿದೆ’ ಎಂದು ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಯದುಪತಿ ಗೌಡ ಹೇಳಿದರು.

ವಾಣಿ ಕಾಲೇಜಿನಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ವರ್ಷ ಸುವರ್ಣ ಕರ್ನಾಟಕ ವರ್ಷವಾದ್ದರಿಂದ ‘ಸುವರ್ಣ  ಕರ್ನಾಟಕ: ಭಾಷೆ ಸಾಹಿತ್ಯ ಸಂಸ್ಕೃತಿ’ ಆಶಯದಲ್ಲಿ ಸಮ್ಮೇಳನದ ರೂಪುರೇಷೆ ತಯಾರಿಸಲಾಗಿದೆ. ಬೆಳಿಗ್ಗೆ 9.30ಕ್ಕೆ ರಾಷ್ಟ್ರಧ್ವಜವನ್ನು ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಕನ್ನಡ ಸಾಹಿತ್ಯ ಪರಿಷತ್ತಿನ ಧ್ವಜವನ್ನು ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಪಿ.ಶ್ರೀನಾಥ್ ಮತ್ತು ತಾಲ್ಲೂಕು ಘಟಕದ ಅಧ್ಯಕ್ಷ ಡಿ.ಯದುಪತಿ ಗೌಡ ಅವರು ಕನ್ನಡ ಧ್ವಜಾರೋಹಣ ನೆರವೇರಿಸುವರು ಎಂದರು.

ಚಿಕ್ಕಮಗಳೂರಿನ ಸಾಹಿತಿ ನಾಗರಾಜ್ ರಾವ್ ಕಲ್ಕಟ್ಟೆ ಕಾರ್ಯಕ್ರಮ ಉದ್ಘಾಟಿಸಲಿದ್ದು, ಸಮ್ಮೇಳನದ ಸಂಚಿಕೆಯನ್ನು ಶಾಸಕ ಹರೀಶ್ ಪೂಂಜ ಬಿಡುಗಡೆ ಮಾಡುವರು. ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸತೀಶ್ಚಂದ್ರ ಎಸ್., ವಾಣಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಪಿ.ಕುಶಾಲಪ್ಪ ಗೌಡ, ಉದ್ಯಮಿ ಕಿರಣ್ ಚಂದ್ರ ಡಿ.ಪುಷ್ಪಗಿರಿ ಭಾಗವಹಿಸಲಿದ್ದಾರೆ.

ವಿವಿಧ ವಿಚಾರಗಳ ಗೋಷ್ಠಿ ನಡೆಯಲಿದೆ. ಬೆಳ್ತಂಗಡಿ ತಾಲ್ಲೂಕಿನ ಪದವಿ ಪೂರ್ವ ಮತ್ತು ಪದವಿ ಕಾಲೇಜು ವಿದ್ಯಾರ್ಥಿಗಳ ಯುವ ಕವಿಗೋಷ್ಠಿ ನಡೆಯಲಿದೆ. ಸಂಜೆ ಸಮಾರೋಪ ನಡೆಯಲಿದ್ದು, ಸಾಹಿತ್ಯ ಸೇವೆಗಾಗಿ ಕೆ.ಎಂ.ಶೆಟ್ಟಿ ಬಳ್ಳಮಂಜ, ದೇಶ ಸೇವೆಗಾಗಿ ಗೋಪಾಲಕೃಷ್ಣ ಭಟ್ ಕಾಂಚೋಡು, ನಾಟಿ ವೈದ್ಯ ಕ್ಷೇತ್ರದಲ್ಲಿ ಬೇಬಿ ಪೂಜಾರಿ ಪಿಲ್ಯ, ಶಿಕ್ಷಣ ಕ್ಷೇತ್ರದ ಸಾಧನೆಗಾಗಿ ಎನ್.ಎಂ.ಜೋಸೆಫ್, ಜಾನಪದ ವಸ್ತು ಸಂಗ್ರಾಹಕ ಹೈದರಾಲಿ ಹಳ್ಳಿಮನೆ ಕೊಯ್ಯೂರು ಅವರನ್ನು ಸನ್ಮಾನಿಸಲಿದ್ದು, ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಪಿ.ಶ್ರೀನಾಥ್ ಅಧ್ಯಕ್ಷತೆ ವಹಿಸುವರು. ಸಮಾರೋಪ ಭಾಷಣಕಾರರಾಗಿ ಸುಳ್ಯದ ಪೂವಪ್ಪ ಕಣಿಯೂರು, ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಶರತ್ ಕೃಷ್ಣ ಪಡುವೆಟ್ನಾಯ ಉಜಿರೆ, ವಾಣಿ ಶಿಕ್ಷಣ ಸಂಸ್ಥೆಗಳ ಗೌರವಾಧ್ಯಕ್ಷ ಎಚ್.ಪದ್ಮ ಗೌಡ, ಸಾಹಿತ್ಯ ಸಂಸ್ಕೃತಿ ಪೋಷಕ ಶ್ರೀಶ ಮುಚ್ಚಿನ್ನಾಯ ಪಾಲ್ಗೊಳ್ಳಲಿದ್ದಾರೆ. ಸಮಾರೋಪದ ನಂತರ ಉಡುಪಿಯ ಕಲಾಮಯಂ ತಂಡದವರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದರು.

ಸಂಯೋಜನಾ ಸಮಿತಿ ಅಧ್ಯಕ್ಷ ಜಯಾನಂದ ಗೌಡ, ಪ್ರಧಾನ ಕಾರ್ಯದರ್ಶಿ ಮೋಹನ ಗೌಡ ಕೊಯ್ಯೂರು, ಕಾರ್ಯದರ್ಶಿ ವಿಷ್ಣು ಪ್ರಕಾಶ್ ಬೆಳ್ತಂಗಡಿ, ಕೋಶಾಧಿಕಾರಿ ಮೀನಾಕ್ಷಿ ಎನ್., ಸಮಿತಿ ಸಂಚಾಲಕ ಕೆ.ಲಕ್ಷ್ಮೀನಾರಾಯಣ, ಸನ್ಮಾನ ಸಮಿತಿ ಸಂಚಾಲಕ ಬಿ.ಲಕ್ಷ್ಮಣ ಪೂಜಾರಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT