ಸಾಹಿತ್ಯ ಸಮ್ಮೇಳನಗಳು ವಸ್ತುನಿಷ್ಟ ಇರಲಿ: ಪ್ರಾಧ್ಯಾಪಕ ಪ್ರೊ.ಬಿ.ಶಿವರಾಮ ಶೆಟ್ಟಿ

7

ಸಾಹಿತ್ಯ ಸಮ್ಮೇಳನಗಳು ವಸ್ತುನಿಷ್ಟ ಇರಲಿ: ಪ್ರಾಧ್ಯಾಪಕ ಪ್ರೊ.ಬಿ.ಶಿವರಾಮ ಶೆಟ್ಟಿ

Published:
Updated:
Deccan Herald

ಉಳ್ಳಾಲ: ‘ ಇಂದು ಸಾಹಿತ್ಯದ ಒಲವು ಕಡಿಮೆಯಾಗುತ್ತಿದ್ದು, ಧರ್ಮಾಧಾರಿತ, ಜಾತಿ ಆಧಾರಿತ ವಿಚಾರಗಳು ಮೇಳೈಸುತ್ತಿವೆ. ಸಾಹಿತ್ಯ ಸಮ್ಮೇಳನಗಳು ಒಂದು ವಿಚಾರವನ್ನು ವಸ್ತುವನ್ನಾಗಿಸಿ ನಡೆಯಬೇಕು ಎಂದು ಮಂಗಳೂರು ವಿಶ್ವವಿದ್ಯಾಲಯದ ಎಸ್‍ವಿಪಿ ಕನ್ನಡ ಅದ್ಯಯನ ಸಂಸ್ಥೆಯ ಪ್ರಾಧ್ಯಾಪಕ ಪ್ರೊ. ಬಿ. ಶಿವರಾಮ ಶೆಟ್ಟಿ ಅಭಿಪ್ರಾಯಪಟ್ಟರು.

 ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ತಾಲ್ಲೂಕು ಘಟಕದ ಆಶ್ರಯದಲ್ಲಿ ದೇರಳಕಟ್ಟೆಯ ವಿದ್ಯಾರತ್ನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶನಿವಾರ ನಡೆದ ಮಂಗಳೂರು ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

‘ಕರಾವಳಿ ಪ್ರದೇಶ ಕನ್ನಡಕ್ಕೆ ಉತ್ತಮ ಕೊಡುಗೆ ನೀಡಿದೆ. ಸಾಹಿತ್ಯ ಸಮ್ಮೇಳನಗಳು ಕೇವಲ ಮಂಗಳೂರು ತಾಲ್ಲೂಕಿಗೆ ಸೀಮಿತವಾಗದೆ ಭೌಗೋಳಿಕ, ಆಡಳಿತಾತ್ಮಕ ಗಡಿಗಳನ್ನು ದಾಟಿ ಎಲ್ಲರೂ ಇಂತಹ ಕಾರ್ಯಕ್ರಮದಲ್ಲಿ ಭಾಗವಹಿಸುವಂತಾಗಬೇಕು’ ಎಂದರು.

ಲೇಖಕಿ ಬಿ.ಎಂ. ರೋಹಿಣಿ ಸಮ್ಮೇಳನದ ಅಧ್ಯಕ್ಷತೆ ವಹಿಸಿ ಮಾತನಾಡಿ, ‘ಕನ್ನಡದಲ್ಲಿ ಬರೆಯುವವರ ಸಂಖ್ಯೆ ಮತ್ತು ಓದುವವರ ಸಂಖ್ಯೆ ಇನ್ನೂ ಕಡಿಮೆಯಾಗಿಲ್ಲ. ಕನ್ನಡ ಅವಸಾನ ಆಯಿತು ಎನ್ನುವುದು ಬೇಡ ಯುವ ಪೀಳಿಗೆಯೂ ಕನ್ನಡ ಅಭಿಮಾನವನ್ನು ಉಳಿಸಿಕೊಂಡಿದ್ದಾರೆ’ ಎಂದರು. ಕನ್ನಡ ಸಾಹಿತ್ಯ ಪರಿಷತ್‍ನ ಜಿಲ್ಲಾ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಆಶಯ ಭಾಷಣ ಮಾಡಿದರು.

ಕುಡುಮಲ್ಲಿಗೆ ಕೃಷ್ಣ ಶೆಟ್ಟಿ ಅವರ ಯಕ್ಷಗಾನ ಕೃತಿ ಮತ್ತು ಪ್ರಫುಲ್ಲಚಂದ್ರ ತಿಂಗಳಾಯ ಬರೆದ ‘ನಾಟಕಕಾರ ಮಾಧವ ತಿಂಗಳಾಯ' ಅವರ ಕುರಿತಾದ ಕೃತಿಯನ್ನು ರತ್ನ ಎಜುಕೇಶನ್ ಟ್ರಸ್ಟ್‌ನ ಅಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು ಬಿಡುಗಡೆ ಮಾಡಿದರು.

ನ್ನಡ ಸಾಹಿತ್ಯ ಪರಿಷತ್‍ನ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಮಹಮ್ಮದ್ ಮೋನು ಮಲಾರ್, ಜಿಲ್ಲಾ ಪಂಚಾಯಿತಿ ಸದಸ್ಯೆ ಧನಲಕ್ಷ್ಮಿ ಗಟ್ಟಿ , ರಶೀದಾ ಬಾನು, ಬೆಳ್ಮ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಿಜಯಾ ಕೃಷ್ಣಪ್ಪ, ರತ್ನ ಎಜುಕೇಶನ್ ಟ್ರಸ್ಟ್‌ನ ಕಾರ್ಯದರ್ಶಿ ಸೌಮ್ಯಾ ಆರ್. ಶೆಟ್ಟಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‍ನ ಗೌರವ ಕಾರ್ಯದರ್ಶಿ ಡಾ. ಎಂ.ಪಿ. ಶ್ರೀನಾಥ್ ಉಜಿರೆ, ಬಿ.ತಮ್ಮಯ್ಯ, ಗೌರವ ಕೋಶಾಧ್ಯಕ್ಷ ಪೂರ್ಣಿಮಾ ರಾವ್ ಪೇಜಾವರ, ಬಂಟ್ವಾಳ ಘಟಕದ ಅಧ್ಯಕ್ಷ ಕೆ. ಮೋಹನ್ ರಾವ್,  ಕನ್ನಡ ಸಾಹಿತ್ಯ ಪರಿಷತ್‍ನ ಮಂಗಳೂರು ತಾಲ್ಲೂಕು ಘಟಕದ ಅಧ್ಯಕ್ಷೆ ವಿಜಯ ಲಕ್ಷ್ಮಿ ಬಿ. ಶೆಟ್ಟಿ ,   ಕೋಶಾಧಿಕಾರಿ ಪ್ರೊ. ಬಿ.ಕೃಷ್ಣ ಮೂರ್ತಿ, ಕಾರ್ಯದರ್ಶಿ ದೇವಕಿ ಅಚ್ಯುತ , ಕಾರ್ಯದರ್ಶಿ ಡಾ. ಪದ್ಮನಾಭ ಭಟ್ ಎಕ್ಕಾರು , ಚೇತನ್ ಕದ್ರಿ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !