ಶನಿವಾರ, ಆಗಸ್ಟ್ 8, 2020
23 °C

ಕೋವಿಡ್-19 | ಸೋಂಕು ನಿಯಂತ್ರಣಕ್ಕಾಗಿ ಲಾಕ್‌ಡೌನ್: ವ್ಯಾಪಾರ, ವಹಿವಾಟು ಸ್ತಬ್ಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಕೋವಿಡ್-19 ಸೋಂಕಿತರ ಸಂಖ್ಯೆ ತೀವ್ರಗತಿಯಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಭಾನುವಾರ ಸಂಪೂರ್ಣ ಲಾಕ್‌ಡೌನ್‌ ಮಾಡಲಾಗಿದ್ದು ನಗರವು ನಿರ್ಜನವಾಗಿದೆ.

ಸಂಪೂರ್ಣ ಲಾಕ್‌ಡೌನ್‌ ಕಾರಣದಿಂದ ನಗರದಲ್ಲಿ ಕಾರ್ಮಿಕರು ಹಾಗೂ ಅಗತ್ಯ ಸಾಮಗ್ರಿಗಳ ಸಾಗಾಟದ ವಾಹನಗಳನ್ನು ಹೊರತುಪಡಿಸಿ ನಗರ ಸಂಪೂರ್ಣವಾಗಿ ಬಂದ್ ಆಗಿದೆ.

ವ್ಯಾಪಾರ ವಹಿವಾಟು ಸ್ಥಗಿತವಾಗಿದ್ದು ಮಾರುಕಟ್ಟೆ ಸಂಪೂರ್ಣವಾಗಿ ಸ್ತಬ್ಧವಾಗಿದೆ. ಮೆಡಿಕಲ್‌ ಹಾಗೂ ಅಗತ್ಯ ಸಾಮಗ್ರಿಗಳನ್ನು ಹೊರತುಪಡಿಸಿ ಎಲ್ಲಾ ಅಂಗಡಿಗಳು ಬಂದ್ ಆಗಿದೆ.

ನಾಗರಿಕರು ಲಾಕ್‌ಡೌನ್ ಅನ್ನು ಉಲ್ಲಂಘಿಸದಂತೆ ನೋಡಿಕೊಳ್ಳಲು ಪಂಪ್‌ವೆಲ್ ಮತ್ತು ಟೌನ್‌ಹಾಲ್ ಸೇರಿದಂತೆ ನಗರ ಹಲವು ಪ್ರಮುಖ ರಸ್ತೆಗಳಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ನಗರದ ವಿವಿಧ ಸ್ಥಳಗಳಾದ ಲಾಲ್‌ಬಾಗ್, ಪಂಪ್‌ವೆಲ್ ಮತ್ತು ಟೌನ್ ಹಾಲ್‌ನಲ್ಲಿ ಬ್ಯಾರಿಕೇಡ್‌ಗಳನ್ನು ಹಾಕಲಾಗಿದೆ.

ಸಂಚಾರ ಮಾಡುತ್ತಿರುವ ಹಲವು ವಾಹನಗಳನ್ನು ಪೊಲೀಸರು ತಡೆದಿದ್ದು ತುರ್ತು ಕಾರಣದಿಂದ ಓಡಾಡುತ್ತಿರುವ ವಾಹನಗಳಿಗೆ ಮಾತ್ರ ಅವಕಾಶ ನೀಡಿದ್ದಾರೆ.

ಭಾನುವಾರ ಲಾಕ್‌ಡೌನ್‌ ಕಾರಣದಿಂದಾಗಿ ತರಕಾರಿ, ಮಾಸದಂಗಡಿಗಳು ತೆರೆಯಲು ಅವಕಾಶವಿಲ್ಲ ಎಂದು ಶನಿವಾರವೇ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್‌ ತಿಳಿಸಿದ್ದಾರೆ.

ಹಾಗೆಯೇ ಜಿಲ್ಲಾಡಳಿತದೊಂದಿಗೆ ಜನರು ಸಹಕರಿಸಬೇಕು ಮತ್ತು ಮನೆಯೊಳಗೆ ಉಳಿಯಬೇಕು ಎಂದು ತಿಳಿಸಿದ್ದಾರೆ.
ಜುಲೈ 6 ರ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ಲಾಕ್‌ಡೌನ್ ಇರಲಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು