ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕ್ ಅದಾಲತ್‌ | 30,729 ಪ್ರಕರಣ ಇತ್ಯರ್ಥ: ₹ 18.92 ಕೋಟಿ ಪರಿಹಾರ ವಸೂಲಿ

Last Updated 13 ಆಗಸ್ಟ್ 2022, 16:08 IST
ಅಕ್ಷರ ಗಾತ್ರ

ಮಂಗಳೂರು: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ‘ರಾಷ್ಟ್ರೀಯ ಲೋಕ್ ಅದಾಲತ್’ ಕಾರ್ಯಕ್ರಮವನ್ನು ಶನಿವಾರ ದಕ್ಷಿಣ ಕನ್ನಡ ಜಿಲ್ಲಾ ಹಾಗೂ ತಾಲ್ಲೂಕುಗಳ ನ್ಯಾಯಾಲಯಗಳ ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು.

ರಾಷ್ಟ್ರೀಯ ಲೋಕ್ ಅದಾಲತ್‌ನಲ್ಲಿ ಒಟ್ಟು 47 ಬೈಠಕ್‍ಗಳು ನಡೆದವು. ಒಟ್ಟು 35,649 ಪ್ರಕರಣಗಳನ್ನು ಪರಿಗಣಿಸಲಾಗಿತ್ತು. ಅದರಲ್ಲಿ 30,729 ಪ್ರಕರಣಗಳು ರಾಜಿಯಾಗಿದ್ದು, ರಾಜಿಯಲ್ಲಿ ಒಟ್ಟು ₹ 18,92,57,121 ಪರಿಹಾರ ಹಣವನ್ನು ವಸೂಲಿ ಮಾಡಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾಗಿರುವ ಜಿಲ್ಲಾ ನ್ಯಾಯಾಧೀಶ ರವೀಂದ್ರ ಎಂ. ಜೋಷಿ, ಹಿರಿಯ ಸಿವಿಲ್ ನ್ಯಾಯಾಧೀಶೆ ಶೋಭಾ ಬಿ.ಜಿ. ತಿಳಿಸಿದರು.

ರಾಷ್ಟ್ರೀಯ ಲೋಕ್ ಅದಾಲತ್‍ನಲ್ಲಿ ಸಾರ್ವಜನಿಕರ ವ್ಯಾಜ್ಯ ಪೂರ್ವ, ರಾಜಿಯಾಗಬಹುದಾದ ಅಪರಾಧಿತ ಪ್ರಕರಣಗಳು, ಚೆಕ್ ಪ್ರಕರಣಗಳು, ಬ್ಯಾಂಕ್ ಪ್ರಕರಣಗಳು, ಮೋಟಾರು ವಾಹನ ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ಸಿವಿಲ್ ಪ್ರಕರಣಗಳು, ಆಸ್ತಿ ವಿಭಾಗದ ಪ್ರಕರಣಗಳು ಹಾಗೂ ಇತರೆ ರಾಜಿಯಾಗಬಹುದಾದ ಪ್ರಕರಣಗಳನ್ನು ಇತ್ಯರ್ಥಪಡಿಸಲಾಯಿತು. ಅದಾಲತ್‍ನಲ್ಲಿ ಸಾರ್ವಜನಿಕರು ಯಾವುದೇ ಶುಲ್ಕವಿಲ್ಲದೇ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT