ಭಾನುವಾರ, 21 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಎಸ್‌ಪಿ ಅಭ್ಯರ್ಥಿಯಾಗಿ ಕಾಂತಪ್ಪ ಅಲಂಗಾರ್ ಏ.3ರಂದು ನಾಮಪತ್ರ ಸಲ್ಲಿಕೆ

Published 30 ಮಾರ್ಚ್ 2024, 14:17 IST
Last Updated 30 ಮಾರ್ಚ್ 2024, 14:17 IST
ಅಕ್ಷರ ಗಾತ್ರ

ಬೆಳ್ತಂಗಡಿ: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಬಹುಜನ ಸಮಾಜ ಪಕ್ಷದ ಅಭ್ಯರ್ಥಿಯಾಗಿ ಬಿಎಸ್‌ಪಿ ರಾಜ್ಯ ಘಟಕದ ಕಾರ್ಯದರ್ಶಿ ಕಾಂತಪ್ಪ ಅಲಂಗಾರ್ ಏ.3ರಂದು ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಬಿಎಸ್‌ಪಿ ಜಿಲ್ಲಾ ಘಟಕದ ಅಧ್ಯಕ್ಷ ಗೋಪಾಲ ಮುತ್ತೂರು ಹೇಳಿದರು.

ಬೆಳ್ತಂಗಡಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಬಿಜೆಪಿ ಮತ್ತು ರಾಜ್ಯದ ಕಾಂಗ್ರೆಸ್ ನೇತೃತ್ವದ ಸರ್ಕಾರದ ದುರಾಡಳಿತದ ವಿರುದ್ಧ ದೇಶ ವ್ಯಾಪಿ ಹೋರಾಟಕ್ಕೆ ಸ್ಪರ್ಧೆ ಮಾಡಲಾಗುತ್ತಿದೆ ಎಂದರು.

ಅಭ್ಯರ್ಥಿ ಕಾಂತಪ್ಪ ಅಲಂಗಾರ್ ಮಾತನಾಡಿ, ದಲಿತ ಮತ್ತು ಹಿಂದುಳಿದ ವರ್ಗದ ಪರವಾಗಿ ಸಂಘಟನೆ ಮೂಲಕ ವಿವಿಧ ಹೋರಾಟದಲ್ಲಿ ಭಾಗವಹಿಸಿದ್ದೇನೆ. ಬಿಎಸ್‌ಪಿ ನನ್ನನ್ನು ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಿದೆ ಎಂದರು.

ಪಕ್ಷದ ಜಿಲ್ಲಾ ಘಟಕದ ಉಪಾಧ್ಯಕ್ಷ ಶಿವಪ್ಪ ಗರ್ಡಾಡಿ, ತಾಲ್ಲೂಕು ಘಟದಕ ಅಧ್ಯಕ್ಷ ಪಿ.ಎಸ್.ಶ್ರೀನಿವಾಸ್ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT