ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಸಭಾ ಚುನಾವಣೆ | ದ.ಕ: ಮೊದಲ ದಿನ ಇಬ್ಬರಿಂದ ನಾಮಪತ್ರ

ಲೋಕಸಭೆ ಚುನಾವಣೆ– ಶುರುವಾಯಿತಿ ಹಣಾಹಣಿ
Published 28 ಮಾರ್ಚ್ 2024, 14:16 IST
Last Updated 28 ಮಾರ್ಚ್ 2024, 14:16 IST
ಅಕ್ಷರ ಗಾತ್ರ

ಮಂಗಳೂರು: ದಕ್ಷಿಣ ಕನ್ನಡ ಕ್ಷೇತ್ರದ ಲೋಕಸಭಾ ಚುನಾವಣೆಗೆ ಗುರುವಾರ ಅಧಿಸೂಚನೆ ಪ್ರಕಟವಾಗಿದ್ದು, ಮೊದಲ ದಿನ ಇಬ್ಬರು ಅಭ್ಯರ್ಥಿಗಳ ನಾಮಪತ್ರಗಳು ಸಲ್ಲಿಕೆಯಾಗಿವೆ.

ಬಿಜೆಪಿ ಅಭ್ಯರ್ಥಿ ಕ್ಯಾ. ಬೃಜೇಶ್‌ ಚೌಟ ಅವರ ನಾಮಪತ್ರ ಗುರುವಾರ ಸಲ್ಲಿಕೆಯಾಗಿದ್ದು, ರವಿಶಂಕರ ಮಿಜಾರ್‌ ಅವರು ಇದಕ್ಕೆ ಸೂಚಕರಾಗಿ ಸಹಿಹಾಕಿದ್ದಾರೆ. ಬೃಜೇಶ್‌ ಚೌಟ  ಏ. 4ರಂದು ಇನ್ನೊಮ್ಮೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಜನತಾದಳ ಯುನೈಟೆಡ್ ಪಕ್ಷದ ಅಭ್ಯರ್ಥಿ ಸುಪ್ರೀತ್‌ ಕುಮಾರ್ ಪೂಜಾರಿ ಅವರೂ ಗುರುವಾರ ನಾಮಪತ್ರ ಸಲ್ಲಿಸಿದ್ದಾರೆ.

ಡಿ.ಸಿ ಕಚೇರಿ ಸುತ್ತ ನಿಷೇಧಾಜ್ಞೆ: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದ ಪ್ರಕ್ರಿಯೆಗಳು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯುತ್ತಿವೆ. ಯಾವುದೇ ಅಹಿತಕರ ಘಟನೆ ಸಂಭವಿಸುವುದನ್ನು ತಡೆಯಲು ಇದೇ 28ರಿಂದ ಏಪ್ರಿಲ್ 8ರ ಸಂಜೆ 6ಗಂಟೆಯವರೆಗೆ ಕಚೇರಿಯ ಆವರಣದ 100 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಆದೇಶ ಮಾಡಿದ್ದಾರೆ.

‘ನಾಮಪತ್ರ ಸಲ್ಲಿಸುವ ಕೇಂದ್ರದ ನಿಷೇಧಿತ 100 ಮೀ ವ್ಯಾಪ್ತಿಯಲ್ಲಿ ಚುನಾವಣೆ ಕರ್ತವ್ಯ ನಿರತ ಅಧಿಕಾರಿಗಳು ಮತ್ತು ಸಿಬ್ಬಂದಿ, ಅಭ್ಯರ್ಥಿಗಳು, ಅನುಮತಿ ಹೊಂದಿದ ರಕ್ಷಣೆ ಇಲಾಖೆ ಸಿಬ್ಬಂದಿ ಹಾಗೂ ಅನುಮತಿ ಪಡೆದ ಮಾಧ್ಯಮದವರನ್ನು ಹೊರತುಪಡಿಸಿ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ. ಯಾವುದೇ ರೀತಿಯ ಘೋಷಣೆ ಕೂಗುವುದು, ಪಟಾಕಿ ಸಿಡಿಸುವುದು, ಮೆರವಣಿಗೆ ನಡೆಸುವುದಕ್ಕೆ ಅವಕಾಶ ಇಲ್ಲ. ಶಾಂತಿ ಮತ್ತು ಶಿಸ್ತು ಪಾಲನೆಗೆ ಭಂಗ ತರುವ ರೀತಿಯಲ್ಲಿ ವರ್ತಿಸಬಾರದು.  ಯಾವುದೇ ರೀತಿಯ ಸಾರ್ವಜನಿಕ ಆಸ್ತಿಗಳನ್ನು ವಿರೂಪಗೊಳಿಸುವುದು, ಹಾನಿ ಉಂಟುಮಾಡುವುದು ಅಥವಾ ನಷ್ಟಗೊಳಿಸುವುದಕ್ಕೆ ಅವಕಾಶವಿಲ್ಲ’

ಸಾರ್ವಜನಿಕವಾಗಿ ಯಾವುದೇ ವ್ಯಕ್ತಿಯ ತೇಜೋವಧೆ ಮಾಡುವಂತಹ ಚಿತ್ರಗಳು, ಚಿಹ್ನೆ, ಪ್ರತಿಕೃತಿ, ಮುಂತಾದವುಗಳನ್ನು ಪ್ರದರ್ಶಿಸುವುದು ಹಾಗೂ ಸಾರ್ವಜನಿಕರ ಗಾಂಭೀರ್ಯ, ನೈತಿಕತೆಗೆ  ಅಥವಾ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳಲ್ಲಿ ತೊಡಗುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ಗುರುವಾರ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT