ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಸಭಾ ಚುನಾವಣೆ | ಪುತ್ತೂರು: ಲಕ್ಷಕ್ಕೂ ಹೆಚ್ಚು ನೋಟಾ ಮತ ಚಲಾಯಿಸುವ ನಿರೀಕ್ಷೆ

ಸೌಜನ್ಯಾ ಹೋರಾಟ ಸಮಿತಿಯಿಂದ ಲೋಕಸಭಾ ಚುನಾವಣೆಯಲ್ಲಿ ನೋಟಾ ಅಭಿಯಾನ
Published 16 ಏಪ್ರಿಲ್ 2024, 4:15 IST
Last Updated 16 ಏಪ್ರಿಲ್ 2024, 4:15 IST
ಅಕ್ಷರ ಗಾತ್ರ

ಪುತ್ತೂರು: ‘12 ವರ್ಷಗಳ ಹಿಂದೆ ನಡೆದ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಯಾವುದೇ ರಾಜಕೀಯ ಪಕ್ಷದಿಂದ ನ್ಯಾಯ ಸಿಗಲಿಲ್ಲ. ಹಾಗಾಗಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ನೋಟಾ ಮತ ಚಲಾಯಿಸಬೇಕೆಂದು ಅಭಿಯಾನ ಮಾಡಲಿದ್ದೇವೆ’ ಎಂದು ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸಂಸ್ಥಾಪಕ ಮಹೇಶ್ ತಿಮರೋಡಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಸೋಮವಾರ ನೋಟಾ ಮತ ಪತ್ರ ಬಿಡುಗಡೆ ಮಾಡಿದ ಅವರು, ‘ನಾವು ಯಾವುದೇ ಪಕ್ಷವನ್ನು ದೂಷಣೆ ಮಾಡುವುದಿಲ್ಲ. ಯಾವುದೇ ರಾಜಕೀಯ ಪಕ್ಷವನ್ನು ಸೋಲಿಸಲು ಮತ್ತು ಯಾರನ್ನೋ ತೇಜೋವಧೆ ಮಾಡಲು ನೋಟ ಅಭಿಯಾನ ಮಾಡುತ್ತಿಲ್ಲ. ಧರ್ಮ, ಸತ್ಯದ ಚುನಾವಣೆಯಾಗಿ ನೋಟಾ ಅಭಿಯಾನ ಮಾಡಲಿದ್ದೇವೆ. 12 ವರ್ಷದಿಂದ ಹೋರಾಟ ಮಾಡುತ್ತಾ ಬಂದಿದ್ದೇವೆ. ನಮ್ಮ ಮೇಲೆ ಸುಳ್ಳು ಆರೋಪ ಮಾಡಿ ಪ್ರಕರಣ ದಾಖಲಿಸಿದ್ದಾರೆ. ಹಾಗಾಗಿ ನಾವು ನೋಟಾಕ್ಕೆ ಮತ ಚಲಾಯಿಸಲಿದ್ದೇವೆ. ನಮಗೆ ಸುಮಾರು ಒಂದೂವರೆಯಿಂದ ಎರಡು ಲಕ್ಷ ನೋಟಾ ಮತ ಬರುವ ನಿರೀಕ್ಷೆ ಇದೆ’ ಎಂದರು.

ಧಾರ್ಮಿಕ ಚಿಂತಕ ತಮ್ಮಣ್ಣ ಶೆಟ್ಟಿ ಮಾತನಾಡಿ, ‘ನಾವು ನ್ಯಾಯಾಕ್ಕಾಗಿ ನೋಟಾ ಅಭಿಯಾನ ಮಾಡುತ್ತಿದ್ದೇವೆ. ಅನ್ಯಾಯ ಮಾಡುವುದು ಅಪರಾಧ, ಅನ್ಯಾಯವನ್ನು ಸಹಿಸುವುದು ಮಹಾ ಅಪರಾಧ ಎಂದು ಅಭಿಯಾನದ ಕರ ಪತ್ರದಲ್ಲಿ ಉಲ್ಲೇಖಿಸಿದ್ದೇವೆ. ನೋಟಾ ಅಭಿಯಾನದಲ್ಲಿ ಸ್ವಾರ್ಥವಿಲ್ಲ’ ಎಂದು ಅವರು ಹೇಳಿದರು.

ಸೌಜನ್ಯಾ ಪರ ಹೋರಾಟ ಸಮಿತಿಯ ಭರತ್ ಕೆಮ್ಮಾರ, ಜಯಂತ್ ಟಿ. ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT