ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಈ ಬಾರಿ ಕರಾವಳಿಯಲ್ಲಿ ಬದಲಾವಣೆ ಆಗಲಿದೆ: ತೇಜಸ್ವಿನಿ ಗೌಡ

Published 25 ಏಪ್ರಿಲ್ 2024, 4:01 IST
Last Updated 25 ಏಪ್ರಿಲ್ 2024, 4:01 IST
ಅಕ್ಷರ ಗಾತ್ರ

ಮುಡಿಪು: ‘ಬಿಜೆಪಿಯವರು ಕಾಂಗ್ರೆಸ್ ಮುಕ್ತ ಮಾಡುತ್ತೇವೆ ಎಂದು ಹೇಳಿ ಅಧಿಕಾರಕ್ಕೆ ಬಂದರು. ಆದರೆ, ಜನರ ಉಸಿರಿನಲ್ಲಿ ಕಾಂಗ್ರೆಸ್ ಇದೆ. ಕರಾವಳಿಯಲ್ಲಿ  ಈ ಬಾರಿ ಬದಲಾವಣೆ ಆಗಿಯೇ ಆಗುತ್ತದೆ. ಹೊಸ ಇತಿಹಾಸ ಸೃಷ್ಟಿಯಾಗಲಿದೆ’ ಎಂದು ಕಾಂಗ್ರೆಸ್ ನಾಯಕಿ ತೇಜಸ್ವಿನಿ ಗೌಡ ಹೇಳಿದರು.

ಮುಡಿಪು ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.

‘ಕರಾವಳಿ ಅಭಿವೃದ್ಧಿಯಾಗಬೇಕಾದರೆ  ಕಾಂಗ್ರೆಸ್‌ ಅಭ್ಯರ್ಥಿ ಪದ್ಮರಾಜ್ ಅವರು ಜಯಗಳಿಸಬೇಕು. ಪ್ರತಿಯೊಂದು ಮತವೂ ಅಮೂಲ್ಯ’ ಎಂದರು.

ಕಾಂಗ್ರೆಸ್ ಮುಖಂಡರಾದ ದಿನೇಶ್ ಗುಂಡುರಾವ್ ಮಾತನಾಡಿ, ‘ಜನರು 10 ವರ್ಷ ಬಿಜೆಪಿಗೆ ಅಧಿಕಾರ ಕೊಟ್ಟಿದ್ದರು. ಆದರೆ, ಹತ್ತು ವರ್ಷದಲ್ಲಿ ಜನರ ಅಭಿವೃದ್ಧಿಗಾಗಿ ಏನೂ ಮಾಡಿಲ್ಲ. ಈಗ 2047ಕ್ಕೆ ರಾಷ್ಟ್ರ ಅಭಿವೃದ್ಧಿಯಾಗಲಿದೆ’ ಎಂದು ಮತ್ತೆ ಜನರನ್ನು ಮೋಸ ಮಾಡಲು ಹೊರಟಿದ್ದಾರೆ’ ಎಂದರು.

ಅಭ್ಯರ್ಥಿ‌ ಪದ್ಮರಾಜ್ ಪೂಜಾರಿ ಅವರು ಮಾತನಾಡಿ, ‘ಬಡವರ ಪರವಾದ ಪಕ್ಷ ಎಂದರೆ ಅದು ಕಾಂಗ್ರೆಸ್ ಮಾತ್ರ. ಐದು ಗ್ಯಾರಂಟಿಗಳ ಮೂಲಕ ಬಡವರಿಗೆ ಶಕ್ತಿ ತುಂಬಿ ನುಡಿದಂತೆ ನಡೆದಿದೆ’ ಎಂದರು.

ಕಾಂಗ್ರೆಸ್‌ನ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷ ಹರೀಶ್ ಕುಮಾರ್, ಇಫ್ತಿಕಾರ್ ಆಲಿ, ಜೆ.ಆರ್ ಲೋಬೊ, ಕೃಪಾ ಅಮರ್ ಆಳ್ವ, ಶಕುಂತಳಾ ಶೆಟ್ಟಿ, ಮಮತಾ ಡಿ.ಎಸ್ ಗಟ್ಟಿ, ಇಬ್ರಾಹಿಂ ಕೋಡಿಜಾಲ್, ಅಶ್ವಿನ್ ಕುಮಾರ್ ರೈ, ಶಾಹುಲ್ ಹಮೀದ್, ಪ್ರತಿಭಾ ಕುಳಾಯಿ, ಚಂದ್ರಹಾಸ ಕರ್ಕೇರ ಮತ್ತಿತರರು ಇದ್ದರು.

20ಕ್ಕೂ ಹೆಚ್ಚು ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್‌ಗೆ ಸೇರ್ಪಡೆಗೊಂಡರು. ಅಬ್ದುಲ್ ಜಲೀಲ್ ಮೋಂಟುಗೋಳಿ ಸ್ವಾಗತಿಸಿದರು. ಅಬ್ದುಲ್ ರಝಾಕ್ ಕುಕ್ಕಾಜೆ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT