ಭಾನುವಾರ, 13 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮಂಗಳೂರು: ಮತಗಟ್ಟೆಯ ವೆಬ್ ಕ್ಯಾಮೆರಾ ಕಳವು

Published : 1 ಮೇ 2024, 15:29 IST
Last Updated : 1 ಮೇ 2024, 15:29 IST
ಫಾಲೋ ಮಾಡಿ
Comments

ಮಂಗಳೂರು: ಬೆಳ್ತಂಗಡಿ ತಾಲ್ಲೂಕಿನ ತೆಕ್ಕಾರು ಗ್ರಾಮದ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 228ರಲ್ಲಿ ಅಳವಡಿಸಿದ್ದ ವೆಬ್ ಕ್ಯಾಮೆರಾ ಕಳ್ಳತನವಾಗಿರುವ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಏ.26ರಂದು ನಡೆಯಲಿರುವ ಚುನಾವಣೆ ಪ್ರಕ್ರಿಯೆಯ ನೇರ ಪ್ರಸಾರಕ್ಕಾಗಿ ಏ.24ರಂದು ವೆಬ್ ಕ್ಯಾಮೆರಾ ಅಳವಡಿಸಲಾಗಿತ್ತು. ಕ್ಯಾಮೆರಾ ಮತ್ತು ಚುನಾವಣಾ ಧ್ವಜ ಕಳ್ಳತನವಾಗಿದೆ ಎಂದು ಬೂತ್ ಅಧಿಕಾರಿ ಮಹಮ್ಮದ್ ಸಿಯಾಬ್ ದೂರಿನಲ್ಲಿ ತಿಳಿಸಿದ್ದಾರೆ.

‘ವೆಬ್ ಕ್ಯಾಮೆರಾವನ್ನು ವೆಬ್ ಕಾಸ್ಟಿಂಗ್ ತಂಡದವರು ಅಳವಡಿಸಿದ್ದರು. ಇದನ್ನು ಚುನಾವಣೆಯ ದಿನದ ನೇರ ಪ್ರಸಾರಕ್ಕಾಗಿ ಅಳವಡಿಸಲಾಗಿತ್ತು. ಇದರಲ್ಲಿ ಯಾವುದೇ ರೆಕಾರ್ಡಿಂಗ್ ಅಥವಾ ಸಂಗ್ರಹಕ್ಕೆ ಅವಕಾಶ ಇರುವುದಿಲ್ಲ. ಜಿಲ್ಲಾ ಚುನಾವಣಾಧಿಕಾರಿ ಕಚೇರಿ ಮತ್ತು ಚುನಾವಣಾ ಆಯೋಗದ ಕಚೇರಿಯಲ್ಲಿ ಚುನಾವಣಾ ಪ್ರಕ್ರಿಯೆ ನೇರ ವೀಕ್ಷಣೆಗಾಗಿ ಮಾತ್ರ ವೆಬ್‌ ಕ್ಯಾಮೆರಾ ಅಳವಡಿಸಲಾಗುತ್ತದೆ’ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸ್ಪಷ್ಟಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT