ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಲೋಕಸಭೆ ಚುನಾವಣೆ: ಅಭ್ಯರ್ಥಿ ವೆಚ್ಚದ ಮೇಲೆ ನಿಗಾಕ್ಕೆ ಸೂಚನೆ

Published 13 ಏಪ್ರಿಲ್ 2024, 6:19 IST
Last Updated 13 ಏಪ್ರಿಲ್ 2024, 6:19 IST
ಅಕ್ಷರ ಗಾತ್ರ

ಮಂಗಳೂರು: ಮುಕ್ತ ಹಾಗೂ ಪಾರದರ್ಶಕ ಚುನಾವಣೆಗೆ ಮಾದರಿ ನೀತಿ ಸಂಹಿತೆಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು. ಪ್ರತಿಯೊಂದು ಘಟನೆಯನ್ನು ಸೂಕ್ಷ್ಮವಾಗಿ ಗಮನಿಸಿ ಅಭ್ಯರ್ಥಿಗಳ ವೆಚ್ಚದ ಬಗ್ಗೆ ನಿಗಾವಹಿಸಬೇಕು ಎಂದು ರಾಜ್ಯಕ್ಕೆ ನಿಯೋಜನೆಗೊಂಡ ವಿಶೇಷ ವೆಚ್ಚ ವೀಕ್ಷಕ ಬಿ. ಮುರಳಿ ಕುಮಾರ್ ನಿರ್ದೇಶನ ನೀಡಿದರು.

ದಕ್ಷಿಣ ಕನ್ನಡ ಲೋಕಸಭಾ ಚುನಾವಣೆ ಕುರಿತಂತೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳ ವೆಚ್ಚಗಳ ಬಗ್ಗೆ ವಿಶೇಷ ನಿಗಾವಹಿಸುವಂತೆ ಹಾಗೂ ಅವರ ಶ್ಯಾಡೋ ರಿಜಿಸ್ಟರ್ ಅನ್ನು ಸೂಕ್ತವಾಗಿ ನಿರ್ವಹಿಸುವಂತೆ ಮತ್ತು ಕಾಲಕಾಲಕ್ಕೆ ಪರಿಶೀಲಿಸುವಂತೆ ಸೂಚಿಸಿದರು.

ಚುನಾವಣಾ ಅವಧಿಯಲ್ಲಿ ಅನುಮಾನಾಸ್ಪದ ವ್ಯವಹಾರಗಳ ಬಗ್ಗೆ ಎಚ್ಚರ ವಹಿಸಬೇಕು, ಪ್ರತಿನಿತ್ಯ ಕ್ರಮಬದ್ದ ವ್ಯವಹಾರಗಳ ಬಗ್ಗೆ ಬ್ಯಾಂಕ್‌ಗಳಿಂದ ಖಾತ್ರಿ ಪಡಿಸಿಕೊಳ್ಳಬೇಕು. ವಿಮಾನ ನಿಲ್ದಾಣ ಹಾಗೂ ಬಂದರು ತಪಾಸಣೆ ಬಗ್ಗೆ ವಿಶೇಷ ನಿಗಾ ವಹಿಸಬೇಕು. ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ ತೀವ್ರಗೊಳಿಸಬೇಕು, ಅಭ್ಯರ್ಥಿಗಳಿಗೆ ಚುನಾವಣಾ ವೆಚ್ಚ ₹95 ಲಕ್ಷ ನಿಗದಿಪಡಿಸಲಾಗಿದೆ ಎಂದು ತಿಳಿಸಿದರು.

ಗಡಿಪಾರು ಮಾಡಿರುವ ರೌಡಿ ಶೀಟರ್‌ಗಳ ಮೇಲೆ ನಿಗಾವಹಿಸುವಂತೆ ಸೂಚಿಸಿದರು.

ಚುನಾವಣಾ ವೆಚ್ಚವೀಕ್ಷಕ ಮೆರುಗು ಸುರೇಶ್, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ., ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್, ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಸಿ.ಬಿ., ಹೆಚ್ಚುವರಿ ಜಿಲ್ಲಾಧಿಕಾರಿ ಸಂತೋಷ್ ಕುಮಾರ್, ಪ್ರೊಬೆಷನರಿ ಐಎಎಸ್ ಅಧಿಕಾರಿ ಮುಕುಲ್ ಜೈನ್, ಚುನಾವಣಾ ಖರ್ಚು ವೆಚ್ಚಗಳ ನಿರ್ವಹಣೆಯ ನೋಡಲ್ ಅಧಿಕಾರಿ ಮೀರಾ ಪಂಡಿತ್, ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT