ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಳೂರು: ಮೆಸ್ಕಾಂ ಕಾರ್ಯಪಾಲಕ ಎಂಜಿನಿಯರ್ ಮನೆಗೆ ಮೇಲೆ ಲೋಕಾಯುಕ್ತ ದಾಳಿ

Published 31 ಜನವರಿ 2024, 7:37 IST
Last Updated 31 ಜನವರಿ 2024, 7:37 IST
ಅಕ್ಷರ ಗಾತ್ರ

ಮಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪ ಹೊತ್ತಿರುವ ಇಲ್ಲಿನ ಮೆಸ್ಕಾಂ ಕಾರ್ಯಪಾಲಕ ಎಂಜಿನಿಯರ್ ಶಾಂತಕುಮಾರ್ ಅವರ ಕಚೇರಿ ಹಾಗೂ ಇಲ್ಲಿನ ಮನೆಗೆ ಲೋಕಾಯುಕ್ತ ಪೊಲೀಸರು ಬುಧವಾರ ದಾಳಿ ನಡೆಸಿದ್ದಾರೆ.

ಮಂಗಳೂರಿನ ಅತ್ತಾವರ ವಿಭಾಗದ ಮೆಸ್ಕಾಂ ಕಚೇರಿಯಲ್ಲಿ ಕಾರ್ಯಪಾಲಕ ಎಂಜಿನಿಯರ್ ಆಗಿರುವ ಶಾಂತಕುಮಾರ್ ನಗರದ ದೇರೆಬೈಲ್ ಕೊಂಚಾಡಿಯ ಶಿವಪ್ರಸಾದ್ ಗೋಲ್ಡ್ ಅಪಾರ್ಟ್‌ಮೆಂಟ್ ಸಮುಚ್ಚಯದಲ್ಲಿ ಹೊಂದಿರುವ ಮನೆಯಲ್ಲಿ ಲೋಕಾಯುಕ್ತ ಪೊಲೀಸರ ತಂಡವು ಪರಿಶೀಲನೆ ನಡೆಸುತ್ತಿದೆ‌.

ಅವರ ಕಚೇರಿಯಲ್ಲೂ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

ಶಾಂತಕುಮಾರ್ ಅವರ ಬೆಂಗಳೂರು ನಿವಾಸದ ಮೇಲೂ ದಾಳಿ ಮಾಡಲಾಗಿದೆ. ಶಾಂತಕುಮಾರ್ ಐದು ವರ್ಷಗಳಿಂದ ಇಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು ಎಂದು ಲೋಕಾಯುಕ್ತ ಪೊಲೀಸ್ ಮೂಲಗಳು ತಿಳಿಸಿವೆ.

'ಅವರ ಆಸ್ತಿ ವಿವರಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ. ಇನ್ನೂ ಪರಿಶೀಲನಾ ಕಾರ್ಯ ಪೂರ್ಣಗೊಂಡಿಲ್ಲ' ಎಂದು ಲೋಕಾಯುಕ್ತ ಪೊಲೀಸ್ ಅಧಿಕಾರಿಯೊಬ್ಬರು 'ಪ್ರಜಾವಾಣಿ'ಗೆ ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT