ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಗುಚಿ ಬಿದ್ದ ಲಾರಿ: ಕಾರು ಚಾಲಕ ಸಾವು

Last Updated 8 ಜುಲೈ 2022, 16:45 IST
ಅಕ್ಷರ ಗಾತ್ರ

ಸುರತ್ಕಲ್: ಸುರತ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಹೊನ್ನಕಟ್ಟೆ ಸಿಗ್ನಲ್ ಬಳಿ ಶುಕ್ರವಾರ ನಿಂತಿದ್ದ ಕಾರಿನ ಮೇಲೆ ಲಾರಿಯೊಂದು ಮಗುಚಿ ಬಿದ್ದ ಪರಿಣಾಂ ಕಾರಿನಲ್ಲಿದ್ದ ಒಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕುಲಾಯಿ ಗೋಕುಲನಗರ ನಿವಾಸಿ ಲೋಕನಾಥ ಮೃತ ವ್ಯಕ್ತಿ. ಲೋಕನಾಥ ಅವರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಹೊನ್ನಕಟ್ಟೆ ಸಿಗ್ನಲ್ ಬಳಿ ರಸ್ತೆ ದಾಟಲು ಕಾರು ನಿಲ್ಲಿಸಿದ್ದರು. ಈ ವೇಳೆ ಹಿಂದಿನಿಂದ ಬಂದ ಲಾರಿ ನಿಯಂತ್ರಣ ತಪ್ಪಿ ಕಾರಿನ ಮೇಲೆ ಮಗುಚಿ ಬಿದ್ದಿದೆ.

ಕಾರಿನ ಮುಂಭಾಗದಲ್ಲಿ ಇದ್ದ ದ್ವಿಚಕ್ರ ವಾಹನಕ್ಕೂ ಹಾನಿಯಾಗಿದ್ದು, ದ್ವಿಚಕ್ರ ವಾಹನ ಸವಾರ ತನ್ನ ಸ್ಕೂಟರ್‌ ಬಿಟ್ಟು ಓಡಿದ್ದರಿಂದ ಪ್ರಾಣಾಪಾಯದಿಂದ ಪಾರಾದರು ಎಂದು ಪ್ರತ್ಯಕ್ಷ‌ದರ್ಶಿಗಳು ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಮಂಗಳೂರು ಉತ್ತರ ಸಂಚಾರ ವಿಭಾಗದ ಪೊಲೀಸರು ಭೇಟಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT