ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಪ್ರಣಾಳಿಕೆ: ಸಂಪರ್, ಕೈಗಾರಿಕೆ, ಸ್ಟಾರ್ಟ್‌ಅಪ್‌ಗೆ ಆದ್ಯತೆ

‘ಸಂಕಲ್ಪ ಪತ್ರ’ ನನಗೆ ನಾನೇ ಹಾಕಿಕೊಂಡಿರುವ ಕಾರ್ಯಸೂಚಿ: ಚೌಟ
Published 24 ಏಪ್ರಿಲ್ 2024, 3:58 IST
Last Updated 24 ಏಪ್ರಿಲ್ 2024, 3:58 IST
ಅಕ್ಷರ ಗಾತ್ರ

ಮಂಗಳೂರು: ಕರಾವಳಿಯ ಸಂಪರ್ಕ, ಮೂಲ ಸೌಕರ್ಯ, ಕೈಗಾರಿಕೆ, ಸ್ಟಾರ್ಟ್‌ಅಪ್‌ಗಳಿಗೆ ಆದ್ಯತೆ ನೀಡಿ ಒಂಬತ್ತು ಪ್ರಮುಖ ಅಂಶಗಳನ್ನು ಒಳಗೊಂಡ ‘ನವಯುಗ: ನವಪಥ’ ಚುನಾವಣಾ ಪ್ರಣಾಳಿಕೆಯನ್ನು ಬಿಜೆಪಿ ಬಿಡುಗಡೆಗೊಳಿಸಿದೆ.

ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಅಧ್ಯಕ್ಷ ಕೆ. ಅಣ್ಣಾಮಲೈ ಮತ್ತು ಸಂಸದ ನಳಿನ್‌ಕುಮಾರ್ ಕಟೀಲ್ ಮಂಗಳವಾರ ಇಲ್ಲಿ ನಡೆದ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದರು.

ಕರಾವಳಿಯಲ್ಲಿ ಕೈಗಾರಿಕೆ ಮತ್ತು ಬಂಡವಾಳ ಆಕರ್ಷಣೆ, ಸ್ಟಾರ್ಟ್‌ಅಪ್ ಮತ್ತು ಉದ್ಯಮಶೀಲತೆ, ಪ್ರವಾಸೋದ್ಯಮ, ನಾರಿಶಕ್ತಿ, ಸಂಸ್ಕೃತಿ ಹಾಗೂ ಪರಂಪರೆ, ಕೃಷಿ, ಪಶುಸಂಗೋಪನೆ, ಮೀನುಗಾರಿಕೆ, ಯುವಜನತೆ ಮತ್ತು ಸಂವಹನ, ಕರಾವಳಿ ಅಭಿವೃದ್ಧಿ ಮತ್ತು ಭದ್ರತೆ, ಸಂಪರ್ಕ, ಮೂಲ ಸೌಕರ್ಯ ಅಭಿವೃದ್ಧಿ ಸೇರಿದಂತೆ ಒಟ್ಟು ಒಂಬತ್ತು ಅಂಶಗಳ ಅಡಿಯಲ್ಲಿ ಜಿಲ್ಲೆಯ ಸಮಗ್ರ ಅಭಿವೃದ್ಧಿಯ ಯೋಜನೆಯ ಭರವಸೆ ನೀಡಲಾಗಿದೆ.

ಬ್ಯಾಕ್‌ ಟು ಊರು: ಸರ್ವಋತು ರಸ್ತೆ ನಿರ್ಮಾಣ, ಆಹಾರ ಸಂಸ್ಕರಣೆ, ಜವಳಿ, ಮೀನುಗಾರಿಕೆ, ಸಮುದ್ರ ಅವಲಂಬಿತ ಉತ್ಪನ್ನಗಳು ವಿಶೇಷ ಕ್ಲಸ್ಟರ್ ಸ್ಥಾಪನೆ ಮತ್ತಿತರ ಕ್ಷೇತ್ರಗಳಲ್ಲಿ ಬಂಡವಾಳ ಹೂಡಿಕೆಗೆ ಉತ್ತೇಜನ ನೀಡುವುದು, ದಶಕಗಳಿಂದ ವಿವಿಧೆಡೆ ಉದ್ಯಮ ಸ್ಥಾಪಿಸಿ, ಯಶಸ್ವಿಯಾಗಿರುವ ಜಿಲ್ಲೆಯ ಜನರನ್ನು ಮತ್ತೆ ಊರಿಗೆ ಕರೆತಂದು ಇಲ್ಲಿನ ಉದ್ಯಮ ಆರಂಭಿಸಿ, ಉದ್ಯೋಗ ಸೃಷ್ಟಿಸಲು ಪ್ರೇರಣೆ ನೀಡಲು ಬ್ಯಾಕ್‌ ಟು ಊರು (back to ooru) ಯೋಜನೆ ರೂಪಿಸಲಾಗಿದೆ. ಉದ್ಯಮಶೀಲ ಯವಜನರನ್ನು ಪ್ರೋತ್ಸಾಹಿಸಲು ‘ಬಿ ಯುವರ್ ವೋನ್ ಬಾಸ್‌’ (be your own boss) ಕಾರ್ಯಕ್ರಮ ಹಮ್ಮಿಕೊಳ್ಳುವ ಕನಸಿದೆ ಎಂದು ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಹೇಳಿದರು.

‘ರಾಣಿ ಅಬ್ಬಕ್ಕ ಹೆಸರಿನಲ್ಲಿ ಸೈನಿಕ ಶಾಲೆ ಸ್ಥಾಪನೆ, ‘ಕ್ಯಾಚ್‌ ಅಪ್ ವಿತ್ ಕ್ಯಾಪ್ಟನ್’ ಕ್ಷೇತ್ರದ ಜನರೊಂದಿಗೆ ನಿರಂತರ ಸಂವಾದ, ಕರಾವಳಿ ನಗರಗಳ ನಡುವೆ ಜಲಮಾರ್ಗದ ಸಾಧ್ಯತೆಗಳ ಅನ್ವೇಷಣೆ, ಭಯೋತ್ಪಾದನಾ ಚಟುವಟಿಕೆ ನಿಗ್ರಹಕ್ಕೆ ಎನ್‌ಐಎ ಮತ್ತು ವಿಧಿವಿಜ್ಞಾನ ಸಂಶೋಧನಾ ಕೇಂದ್ರ ಸ್ಥಾಪನೆಗೆ ಒತ್ತು ನೀಡಲಾಗುವುದು. ಪ್ರಧಾನಿ ನರೇಂದ್ರ ಮೋದಿ ಅವರ ವಿಕಸಿತ ಭಾರತದ ಕಲ್ಪನೆಗೆ ಪೂರಕವಾಗಿ ವಿಕಸಿತ ದಕ್ಷಿಣ ಕನ್ನಡ ಜಿಲ್ಲೆಗೆ ನನಗೆ ನಾನೇ ಹಾಕಿಕೊಂಡಿರುವ ಕಾರ್ಯಸೂಚಿ ಇದಾಗಿದೆ’ ಎಂದು ಹೇಳಿದರು.

ಶಾಸಕರಾದ ರಾಜೇಶ್ ನಾಯ್ಕ ಉಳಿಪಾಡಿ, ಡಾ. ಭರತ್ ಶೆಟ್ಟಿ, ವೇದವ್ಯಾಸ ಕಾಮತ್, ಜಿಲ್ಲಾ ಘಟಕದ ಅಧ್ಯಕ್ಷ ಸತೀಶ್ ಕುಂಪಲ, ಪಕ್ಷದ ಪ್ರಮುಖರಾದ ಉದಯಕುಮಾರ್ ಶೆಟ್ಟಿ, ಕ್ಯಾ. ಗಣೇಶ್ ಕಾರ್ಣಿಕ್, ಸುದರ್ಶನ್ ಮೂಡುಬಿದಿರೆ, ಕಿಶೋರ್‌ಕುಮಾರ್, ಸುಧೀರ್ ಶೆಟ್ಟಿ ಕಣ್ಣೂರು, ನಾಗರಾಜ ಶೆಟ್ಟಿ, ಮೋನಪ್ಪ ಭಂಡಾರಿ, ಬಾಲಕೃಷ್ಣ ಭಟ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT