ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಭಿವೃದ್ಧಿ ಬಿಟ್ಟು ಅಪಪ್ರಚಾರಕ್ಕೆ ಬಿಜೆಪಿ ಆದ್ಯತೆ: ಪದ್ಮರಾಜ್

Published 20 ಏಪ್ರಿಲ್ 2024, 5:02 IST
Last Updated 20 ಏಪ್ರಿಲ್ 2024, 5:02 IST
ಅಕ್ಷರ ಗಾತ್ರ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 33 ವರ್ಷಗಳಿಂದ ಸ್ಥಗಿತಗೊಂಡಿದ್ದ ಅಭಿವೃದ್ಧಿ ಮತ್ತು ಉದ್ಯೋಗ ಸೃಷ್ಟಿ ವಿಚಾರಗಳು ಮರೆಯಾಗಿ ಕೇವಲ ಕೋಮು ದ್ವೇಷ ಹರಡುವ ಮತ್ತು ಅಪ್ರಚಾರಕ್ಕೆ ಆದ್ಯತೆ ನೀಡಿದ ಬಿಜೆಪಿಗೆ ಈ ಬಾರಿ ಕಡಿವಾಣ ಹಾಕಬೇಕು ಎಂದು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಹೇಳಿದರು.

ಇಲ್ಲಿನ ಬಿ.ಸಿ.ರೋಡು ರಾಷ್ಟ್ರೀಯ ಹೆದ್ದಾರಿಯಲ್ಲಿ ರೋಡ್ ಶೋ ನಡೆಸಿದ ಅವರು ಸಾರ್ವಜನಿಕ ಸಭೆಯಲ್ಲಿ ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ.ಹರೀಶ್‌ ಕುಮಾರ್, ‘ಈ ಬಾರಿ ಯುವ ಉತ್ಸಾಹಿ ಕಾಂಗ್ರೆಸ್ ಅಭ್ಯರ್ಥಿ ಪರ ಎಲ್ಲೆಡೆ ಬೆಂಬಲ ವ್ಯಕ್ತವಾಗುತ್ತಿದೆ’ ಎಂದರು.

ಮಾಜಿ ಸಚಿವ ಬಿ.ರಮಾನಾಥ ರೈ ಮಾತನಾಡಿದರು.

ವಕೀಲ ಅಶ್ವನಿ ಕುಮಾರ್ ರೈ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಬಿ.ಪದ್ಮಶೇಖರ ಜೈನ್, ಎಂ.ಎಸ್.ಮಹಮ್ಮದ್, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಪ್ರಮುಖರಾದ ಸುದರ್ಶನ್ ಜೈನ್, ಕೆ.ಪದ್ಮನಾಭ ರೈ, ಕೆ.ಸಂಜೀವ ಪೂಜಾರಿ ಬೊಳ್ಳಾಯಿ, ಕೆ.ಮಾಯಿಲಪ್ಪ ಸಾಲ್ಯಾನ್, ಅಬ್ಬಾಸ್ ಅಲಿ, ಸದಾಶಿವ ಬಂಗೇರ, ಮಹಮ್ಮದ್ ನಂದಾವರ, ಜಯಂತಿ ವಿ.ಪೂಜಾರಿ, ಜೋಸ್ಪಿನ್ ಡಿಸೋಜ, ಅನ್ವರ್ ಕರೋಪಾಡಿ, ಮೋಹನ್ ಗೌಡ ಕಲ್ಮಂಜ, ಸುರೇಶ್ ಕುಲಾಲ್ ನಾವೂರು, ಜಗದೀಶ್ ಕೊಯಿಲ, ನಾರಾಯಣ ನಾಯ್ಕ್, ಮಹಮ್ಮದ್ ಶರೀಫ್, ಜನಾರ್ದನ ಚಂಡ್ತಿಮಾರ್ ಭಾಗವಹಿಸಿದ್ದರು.

ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ಸ್ವಾಗತಿಸಿ, ಪಾಣೆಮಂಗಳೂರು ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹಿಂ ನವಾಜ್ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT