ಮಂಗಳೂರು: ಜಿಲ್ಲೆಯ ಕರಾವಳಿ ಭಾಗಗಳಲ್ಲಿ ಮೀನುಗಾರರ ಹಿತದೃಷ್ಟಿಯಿಂದ ಜೂನ್ 1ರಿಂದ ಜುಲೈ 31ರ ವರೆಗೆ 61 ದಿನಗಳ ಅವಧಿಗೆ ತಾತ್ಕಾಲಿಕವಾಗಿ ಯಾಂತ್ರಿಕ ಮೀನುಗಾರಿಕೆ ನಿಷೇಧಿಸಲಾಗಿದೆ.

10 ಅಶ್ವಶಕ್ತಿವರೆಗಿನ ಸಾಮರ್ಥ್ಯದ ಮೋಟಾರ್ ಅಳವಡಿಸಿದ ಎಂಜಿನ್ ಹಾಗೂ ಸಾಂಪ್ರದಾಯಿಕ ಅಥವಾ ನಾಡದೋಣಿಗಳ ಮೂಲಕ ಮೀನುಗಾರಿಕೆ ಕೈಗೊಳ್ಳಲು ಅವಕಾಶವಿದೆ.

ಬಲೆಗಳು, ಮೀನುಗಾರಿಕಾ ಸಾಧನಗಳು ಅಥವಾ ಯಾವುದೇ ಯಾಂತ್ರೀಕೃತ ದೋಣಿಗಳನ್ನು ಬಳಸಿ ಹಾಗೂ 10 ಅಶ್ವಶಕ್ತಿಗಿಂತ ಹೆಚ್ಚಿನ ಸಾಮರ್ಥ್ಯದ ಇನ್‍ಬೋರ್ಡ್ ಅಥವಾ ಔಟ್‍ಬೋರ್ಡ್ ಯಂತ್ರಗಳನ್ನು ಅಳವಡಿಸಿದ ಸಾಂಪ್ರದಾಯಿಕ ದೋಣಿಗಳ ಮೂಲಕ ಮೀನುಗಾರಿಕೆ ಮಾಡುವುದನ್ನು ನಿಷೇಧಿಸಲಾಗಿದೆ.

ನಿಯಮಗಳನ್ನು ಉಲ್ಲಂಘಿಸಿದಲ್ಲಿ ಕರ್ನಾಟಕ ಕಡಲ ಮೀನುಗಾರಿಕಾ ಕಾಯ್ದೆ–1986ರ ಅನ್ವಯ ಒಂದು ವರ್ಷದ ಅವಧಿಗೆ ಡೀಸೆಲ್ ಮೇಲಿನ ಸಹಾಯಧನ ಪಡೆಯಲು ಅನರ್ಹರಾಗುತ್ತಾರೆ ಎಂದು ಮೀನುಗಾರಿಕೆಯ ಜಂಟಿ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.