ಬುಧವಾರ, ಮಾರ್ಚ್ 29, 2023
25 °C
ಮಹಾಗಣಪತಿ ದೇಗುಲದ ಅಷ್ಠಬಂಧ ಬ್ರಹ್ಮಕಲಶೋತ್ಸವದಲ್ಲಿ ಒಡಿಯೂರು ಶ್ರೀ

ಶರೀರ ಸದ್ಬಳಕೆ ಮಾಡಿದರೆ ಸಾರ್ಥಕತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳ್ತಂಗಡಿ: ‘ದೇವರು ನೀಡಿದ ಶರೀರವನ್ನು ಸರಿಯಾದ ರೀತಿಯಲ್ಲಿ ಬಳಕೆ ಮಾಡಬೇಕು. ಆಗ ಬದುಕಿನಲ್ಲಿ ಸಾರ್ಥಕತೆ ಬರುತ್ತದೆ. ದೇಗುಲದ ಜೀಣೋದ್ಧಾರ ಆತ್ಮೋದ್ಧಾರದ ಪೂರಕ. ಇದರಿಂದ ಊರಿನಲ್ಲಿ ಪುಣ್ಯ ಸಂಚಯವಾಗುತ್ತದೆ’ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್ ಮಠದ ಶ್ರೀ ಗುರುದೇವಾನಂದ ಸ್ವಾಮೀಜಿ ನುಡಿದರು.

ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಪ್ರಯುಕ್ತ ಭಾನುವಾರ ರಾತ್ರಿಯ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದ ಅವರು ಸಮಾಜದಲ್ಲಿ ಸಂಸ್ಕಾರ ತುಂಬಿಸುವ ಕೆಲಸ ಇಂತಹ ಧಾರ್ಮಿಕ ಶ್ರದ್ಧಾಕೇಂದ್ರಗಳಿಂದ ಆಗುತ್ತದೆ ಎಂದರು.

ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಶಿವಪ್ರಸಾದ್ ಅಜಿಲ ಅಧ್ಯಕ್ಷತೆ ವಹಿಸಿದ್ದರು. ಅಳದಂಗಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸೌಮ್ಯ ಹರಿಪ್ರಸಾದ್, ಶಿರ್ಲಾಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ನವೀನ್ ಸಾಮಾನಿ, ಬೆಳ್ತಂಗಡಿ ಜೆಸಿಐ ಅಧ್ಯಕ್ಷ ಶಂಕರ ರಾವ್, ಬ್ರಹ್ಮಕಲಶ ಸಮಿತಿ ಕಾರ್ಯಾಧ್ಯಕ್ಷ ಸದಾನಂದ ಪೂಜಾರಿ ಉಂಗಿಲಬೈಲು, ಪ್ರಧಾನ ಕಾರ್ಯದರ್ಶಿ ಸಂತೋಷ್ ಕುಮಾರ್ ಕಾಪಿನಡ್ಕ ಇದ್ದರು. ಜೀರ್ಣೋದ್ಧಾರ ಸಮಿತಿ ಕಾರ್ಯದರ್ಶಿ ಎ. ಮೋಹನದಾಸ್ ಸ್ವಾಗತಿಸಿ, ಉಪಾಧ್ಯಕ್ಷ ರಾಜೀತ್ ರೈ ವಂದಿಸಿದರು. ವ್ಯವಸ್ಥಾಪನ ಸಮಿತಿ ಸದಸ್ಯ ನಿತ್ಯಾನಂದ ಶೆಟ್ಟಿ ನೊಚ್ಚ ವಂದಿಸಿದರು.

ದೇವಸ್ಥಾನದ ಜೀರ್ಣೋದ್ಧಾರಕ್ಕೆ ಮರದ ದಾನಿ ರವಿ ಕೋಟ್ಯಾನ್ ಹಾಗೂ ವಿಶೇಷ ಕೊಡುಗೆ ನೀಡಿದ ದೇವದಾಸ್ ಅವರನ್ನು ಸಮ್ಮಾನಿಸಲಾಯಿತು. ಮನಿಷಾ ಅಳದಂಗಡಿ ಅವರು ಕೈಚಳಕದ ಮೂಲಕ ನೂಲಿನಿಂದ ಬಿಡಿಸಿದ ಗಣಪತಿ ಭಾವಚಿತ್ರವನ್ನು ಸ್ವಾಮೀಜಿ ಅನಾವರಣಗೊಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.