ಮಂಗಳೂರು: ಕೋವಿಡ್ ಕಾರಣಕ್ಕೆ ನಗರದ ಗಾಂಧಿ ಪಾರ್ಕ್ನಲ್ಲಿ ಮಹಾತ್ಮ ಗಾಂಧೀಜಿ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.

ಜಿಲ್ಲಾಡಳಿತ ಹಾಗೂ ಭಾರತ್ ಸೇವಾದಳದ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮೀನುಗಾರಿಕೆ ಸಚಿವ ಎಸ್. ಅಂಗಾರ, ಮಹಾತ್ಮ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.

ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ, ಪ್ರಭಾರಿ ಹೆಚ್ಚುವರಿ ಜಿಲ್ಲಾಧಿಕಾರಿ ಮಾಣಿಕ್ಯ, ಉಪ ವಿಭಾಗಾಧಿಕಾರಿ ಮದನ್ ಮೋಹನ್, ಭಾರತ್ ಸೇವಾ ದಳದ ಜಿಲ್ಲಾ ಘಟಕದ ಅಧ್ಯಕ್ಷ ರಹೀಂ ಬಷೀರ್, ಪ್ರಧಾನ ಕಾರ್ಯದರ್ಶಿ ಟಿ.ಕೆ. ಸುಧೀರ್, ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಇದ್ದರು.

ಮಂಗಳೂರು: ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್, ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಜಿಲ್ಲಾ ಪಂಚಾಯಿತಿ, ಸ್ವಚ್ಛ ಭಾರತ್ ಮಿಷನ್ ಹಾಗೂ ನರೇಗಾ ಯೋಜನೆ ವತಿಯಿಂದ ನಗರದ ಜಿಲ್ಲಾ ಪಂಚಾಯತ್ ಆವರಣದಲ್ಲಿ ‘ಆಜಾದಿ ಕಾ ಅಮೃತ ಮಹೋತ್ಸವ’, ‘ಸ್ವಚ್ಛತಾ ಹೀ ಸೇವಾ’ ಮತ್ತು 100 ದಿನಗಳ ಸೋಕ್ಪಿಟ್ ಅಭಿಯಾನಕ್ಕೆ ಸಚಿವ ಎಸ್. ಅಂಗಾರ ಚಾಲನೆ ನೀಡಿದರು.

‘ಸ್ಪಚ್ಛತೆ ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ನಮ್ಮ ಸುತ್ತಲಿನ ಪ್ರದೇಶವನ್ನು ಸ್ಪಚ್ಛವಾಗಿಟ್ಟುಕೊಂಡಲ್ಲಿ ಇಡೀ ಪ್ರದೇಶ ಸ್ಪಚ್ಛವಾಗುತ್ತದೆ’ ಎಂದು ಸಚಿವ ಎಸ್. ಅಂಗಾರ ಹೇಳಿದರು.

‘ಆಜಾದಿ ಕಾ ಅಮೃತ ಮಹೋತ್ಸವ’ದ ಪ್ರಯುಕ್ತ ‘ಸತ್ಯಾಗ್ರಹಾ ಪೇ ಸ್ವಚ್ಛಾಗ್ರಹಿ’ ರಥಯಾತ್ರೆಗೆ ಚಾಲನೆ ನೀಡಲಾಯಿತು.

ಸಂಸದ ನಳಿನ್ಕುಮಾರ್ ಕಟೀಲ್, ಶಾಸಕ ವೇದವ್ಯಾಸ ಕಾಮತ್, ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಸಂಧ್ಯಾ ಇದ್ದರು. ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಆನಂದ್ ಕುಮಾರ್ ವಂದಿಸಿದರು. ಚಿನ್ಮಯಿ ಗಾಂಧಿ ಸೃತಿ ಹಾಡಿದರು.

ಸ್ವಚ್ಛ ಸೇವಕ ಸನ್ಮಾನ: ಬೆಳ್ತಂಗಡಿ ತಾಲ್ಲೂಕಿನ ಉಜಿರೆ ಗ್ರಾಮ ಪಂಚಾಯಿತಿಯ ಕುಮಾರ್ ಪಟ್ಟಾನ್, ಸುಳ್ಯ ತಾಲ್ಲೂಕಿನ ಅರಂತೋಡು ಗ್ರಾಮ ಪಂಚಾಯಿತಿಯ ಪಸೀಲು ಎ, ಮಂಗಳೂರು ತಾಲ್ಲೂಕಿನ ಕೆಮ್ರಾಲ್ ಗ್ರಾಮ ಪಂಚಾಯಿತಿಯ ದೊಡ್ಡ ಹನುಮಂತ ಪೂಜಾರ, ಮೂಡುಬಿದಿರೆ ತಾಲ್ಲೂಕಿನ ಪುತ್ತಿಗೆ ಗ್ರಾಮ ಪಂಚಾಯಿತಿಯ ಹರೀಶ್ ಬಿನ್ ಗಂಗು, ಕಡಬ ಸುಬ್ರಹ್ಮಣ್ಯ ಗ್ರಾಮ ಪಂಚಾಯಿತಿಯ ಉದಯ ಕುಮಾರ್ ಎ, ಪುತ್ತೂರು ತಾಲ್ಲೂಕಿನ ಉಪ್ಪಿನಂಗಡಿ ಗ್ರಾಮ ಪಂಚಾಯಿತಿಯ ಜೋಸೆಫ್ ಆನಂದ, ಬಂಟ್ವಾಳ ತಾಲ್ಲೂಕಿನ ಇಡ್ಕಿದು ಗ್ರಾಮ ಪಂಚಾಯಿತಿಯ ನಾರಾಯಣ ನಾಯ್ಕ ಅವರನ್ನು ಗೌರವಿಸಲಾಯಿತು.

ಪುತ್ತೂರು ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ ಎಚ್, ಬೆಳ್ತಂಗಡಿ ತಾಲ್ಲೂಕಿನ ಉಜಿರೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ಪಿ.ಎಚ್ ಅವರನ್ನು ಗೌರವಿಸಲಾಯಿತು. ಮಂಗಳೂರು ತಾಲ್ಲೂಕಿನ ಪಾವೂರು, ಮಂಜನಾಡಿ ಗ್ರಾಮ ಪಂಚಾಯಿತಿ ಹಾಗೂ ಮೂಡುಬಿದಿರೆ ತಾಲ್ಲೂಕಿನ ಬೆಳುವಾಯಿ ಗ್ರಾಮ ಪಂಚಾಯಿತಿ ಸ್ವಚ್ಛ ವಾಹಿನಿ ವಾಹನವನ್ನು ಹಸ್ತಾಂತರಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.