ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಡಿ ಭಾಗದ ಸಾಮರಸ್ಯ ಕದಡದಿರಲಿ

ಗಡಿ ಉತ್ಸವ ಉದ್ಘಾಟಿಸಿದ ಯು.ಟಿ. ಖಾದರ್
Last Updated 21 ಡಿಸೆಂಬರ್ 2021, 5:05 IST
ಅಕ್ಷರ ಗಾತ್ರ

ಮಂಗಳೂರು: ರಾಜ್ಯದ ಗಡಿಭಾಗ ಎಂದರೆ ಎರಡು ರಾಜ್ಯಗಳ ನಡುವಿನ ಕೊಂಡಿಗಳಿದ್ದಂತೆ ಇರುವ ಪ್ರದೇಶಗಳು. ಅಲ್ಲಿ ಸಾಮರಸ್ಯ, ಸೌಹಾರ್ದಕ್ಕೆ ಧಕ್ಕೆ ಆಗುವ ಯಾವುದೇ ಚಟುವಟಿಕೆಗಳು ನಡೆಯದಂತೆ ಎಚ್ಚರಿಕೆ ವಹಿಸಬೇಕಾದ ಹೊಣೆಗಾರಿಕೆ ಎಲ್ಲರ ಮೇಲಿದೆ ಎಂದು ಶಾಸಕ ಯು.ಟಿ.ಖಾದರ್ ಹೇಳಿದರು.

ಕೊಲ್ಯ ಬೀರಿಯ ಬ್ರಹ್ಮ ಶ್ರೀ ನಾರಾಯಣ ಗುರು ಸಭಾಂಗಣದಲ್ಲಿ ಕರ್ನಾಟಕ ಸಾಮಾಜಿಕ, ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನದ ಆಶ್ರಯದಲ್ಲಿ ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ಪ್ರಾಯೋಜಕತ್ವದಲ್ಲಿ ಹಮ್ಮಿಕೊಂಡಿದ್ದ ಗಡಿ ಉತ್ಸವ ಉದ್ಘಾಟಿಸಿ ಅವರು ಮಾತನಾಡಿದರು.

ಭಾಷಾವಾರು ಪ್ರಾಂತ್ಯ ರಚನೆಯಾದ ಬಳಿಕ ಕಾಸರಗೋಡು ಕೇರಳಕ್ಕೆ ಸೇರಿದ ಕಾರಣ, ಅಲ್ಲಿನ ಕನ್ನಡಿಗರು ತಾವು ಕರ್ನಾಟಕದಲ್ಲಿ ಸೇರ್ಪಡೆಯಾಗಲು ಸಾಧ್ಯವಾಗಿಲ್ಲ ಎಂಬ ನೋವು ಹೊಂದಿದ್ದಾರೆ. ಕರ್ನಾಟಕದ ಗಡಿ ಭಾಗದ ಕನ್ನಡಿಗರಿಗೆ ಕರ್ನಾಟಕ ಸರ್ಕಾರ ಸಾಧ್ಯವಾಗುವ ಎಲ್ಲ ನೆರವು ನೀಡಲು ಮುಂದಾಗಬೇಕು. ಗಡಿಭಾಗದ ಸೌಹಾರ್ದ ವಾತವರಣ ಕದಡದಂತೆ ಎಚ್ಚರಿಕೆ ವಹಿಸಬೇಕಾಗಿದೆ ಎಂದು ಅಭಿಪ್ರಾಯಪಟ್ಟರು.

ಕರ್ನಾಟಕ ಸಾಮಾಜಿಕ, ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನದ ಅಧ್ಯಕ್ಷೆ ರಾಣಿ ಪುಷ್ಪಲತಾ ದೇವಿ ಅಧ್ಯಕ್ಷತೆ ವಹಿಸಿದ್ದರು. ಪತ್ರಕರ್ತ ಪುಷ್ಪರಾಜ್ ಬಿ.ಎನ್. ಮಾತನಾಡಿದರು. ಕಲಾವಿದ ಭಾಸ್ಕರ್ ಅವರ ತಂಡ ಹಾಗೂ ಇತರ ಸಾಂಸ್ಕೃತಿಕ ಪ್ರತಿಭೆಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು. ಅಂಗವಿಕಲರ ಜಿಲ್ಲಾ ಕಲ್ಯಾಣಾಧಿಕಾರಿ ಗೋಪಾಲ ಕೃಷ್ಣ, ಕೊಲ್ಯ ಬಿಲ್ಲವ ಸೇವಾ ಸಮಾಜ ಟ್ರಸ್ಟ್ ಅಧ್ಯಕ್ಷ ವೇಣುಗೋಪಾಲ ಕೊಲ್ಯ ವೇದಿಕೆಯಲ್ಲಿದ್ದರು. ಗಂಗಾಧರ ಗಾಂಧಿ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT