ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೀರಿನ ಸಮಸ್ಯೆ ಆಗದಂತೆ ನೋಡಿಕೊಳ್ಳಿ: ಜಿ.ಪಂ. ಸಿಇಒ ಡಾ. ಕುಮಾರ್

ಜಿಲ್ಲಾ ನೀರು, ನೈರ್ಮಲ್ಯ ಮಿಷನ್‌ ಸಭೆ
Last Updated 17 ಮಾರ್ಚ್ 2021, 4:42 IST
ಅಕ್ಷರ ಗಾತ್ರ

ಮಂಗಳೂರು: ಬೇಸಿಗೆಯಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಕುಮಾರ್ ತಿಳಿಸಿದರು.

ನಗರದ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಮಂಗಳವಾರ ನಡೆದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಉಳ್ಳಾಲ ನಗರಸಭೆ, ಕೋಟೆಕಾರ್ ಪಟ್ಟಣ ಪಂಚಾಯಿತಿ ಸೇರಿದಂತೆ ಈ ವ್ಯಾಪ್ತಿಯ ಮಾರ್ಗ ಮಧ್ಯದಲ್ಲಿ ಬರುವ ಮಂಗಳೂರು ಹಾಗೂ ಬಂಟ್ವಾಳ ತಾಲ್ಲೂಕಿನ 24 ಗ್ರಾಮಗಳಿಗೆ ಕುಡಿಯುವ ನೀರು ಒದಗಿಸಲು ಕೈರಂಗಳದ ಬಳಿ ನಿರ್ಮಿಸಲಾಗುತ್ತಿರುವ 72 ಎಂಎಲ್‌ಡಿ ಸಾಮರ್ಥ್ಯದ ನೀರು ಶುದ್ಧೀಕರಣ ಘಟಕದಿಂದ ಬಲ್ಕ್ ವಾಟರ್‌ ಸರಬರಾಜು ಮಾಡುವ ಯೋಜ ನೆಗಳನ್ನು ₹249 ಕೋಟಿ ವೆಚ್ಚ ದಲ್ಲಿ ಪ್ರಾರಂಭಿಸಲಾಗುತ್ತಿದೆ ಎಂದರು.

ಈ ಯೊಜನೆಯಿಂದಾಗಿ 24 ಗ್ರಾಮ ಗಳಿಗೆ 85 ಎಲ್‌ಪಿಸಿಡಿ ನೀರಿನ ಬೇಡಿಕೆ ಇದ್ದು, ಇದರನ್ವಯ ಮಂಗಳೂರಿನ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ವಿಭಾಗವು ₹83.33ಕೋಟಿ ಅಂದಾಜು ತಯಾರಿಸಿ ಸಲ್ಲಿಸಿದೆ. ಈ ಯೋಜನೆಯು ನೇತ್ರಾವತಿ ನದಿ ಮೂಲವನ್ನು ಆಧರಿಸಿರುವುದರಿಂದ ಮುಂದಿನ ದಿನಗಳಲ್ಲಿ ನೀರಿನ ಯಾವುದೇ ಸಮಸ್ಯೆ ಎದುರಾಗುವುದಿಲ್ಲ. ಹೀಗಾಗಿ ಪ್ರಸ್ತಾವವನ್ನು ಅನುಮೋದಿಸಿ ಸರ್ಕಾರಕ್ಕೆ ಕಳುಹಿಸಿಕೊಡಲಾಗುವುದು ಎಂದರು.

ಈ ಯೋಜನೆಯಿಂದ ಮುಡಾ ವ್ಯಾಪ್ತಿಗೆ ಬರುವ ಸೋಮೇಶ್ವರ, ಕೊಣಾಜೆ, ಬೆಳ್ಮ, ಆಂಬ್ಲಮೊಗರು, ಹರೇಕಳ, ಮುನ್ನೂರು, ಕಿನ್ಯ ಮತ್ತು ತಲಪಾಡಿ ಹಾಗೂ ಸಜಿಪಮೂಡ, ಸಜಿಪ ನಡು, ನರಿಂಗಾನ, ಕೈರಂಗಳ, ಪಜೀರು, ಇರಾ, ಕಾರ್ನಾಡು, ಬಾಳೆಪುಣಿ, ಚೇಳೂರು, ಬೋಳಿಯಾರು, ಪಾವೂರು ಹಾಗೂ ಮಂಜನಾಡಿ ಸೇರಿದಂತೆ ಹೆಚ್ಚುವರಿಯಾಗಿ ಬೋಳಂತೂರು, ಸಜಿಪ ಮುನ್ನೂರು, ಮಂಚಿ ಹಾಗೂ ವೀರಕಂಭ ಗ್ರಾಮಗಳಿಗೆ ಕುಡಿಯುವ ನೀರಿನ ಸೌಲಭ್ಯ ಒದಗಲಿದೆ ಎಂದರು.

ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ವಿಭಾಗಕ್ಕೆ ಎಸ್‌ಟಿಪಿ ಹಾಗೂ ಟಿಎಸ್‌ಪಿ ಯೋಜನೆಯ ಅನುದಾನದಲ್ಲಿ ಸುಳ್ಯದ ಗ್ರಾಮೀಣ ಭಾಗದ ವಿದ್ಯಾರ್ಥಿ ನಿಲಯಕ್ಕೆ ಬಟ್ಟೆ ಒಗೆಯುವ ಯಂತ್ರಗಳನ್ನು ಒದಗಿಸಲಾಗುವುದು ಎಂದರು.

ಸಭೆಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ನರೇಂದ್ರ ಬಾಬು, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಇಲಾಖೆಯ ಯೋಜನಾ ನಿರ್ದೇಶಕಿ ಹೇಮಲತಾ ಬಿ.ಎಸ್., ಜಂಟಿ ಕೃಷಿ ನಿರ್ದೇಶಕಿ ಸೀತಾ, ಗ್ರಾಮಿಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಸಹಾಯಕ ಎಂಜಿನಿಯರ್ ಗೋಪಿ ಆರ್., ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಸಿಬ್ಬಂದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT