ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಲೆಕುಡಿಯರು ಪ್ರಕೃತಿಯ ಆರಾಧಕರು: ಪ್ರತಾಪ ಸಿಂಹ ನಾಯಕ್

ಆರೋಗ್ಯ ಶಿಬಿರದಲ್ಲಿ ಆರೋಗ್ಯ ಕಾರ್ಡ್ ವಿತರಿಸಿದ ಪ್ರತಾಪ ಸಿಂಹ  ನಾಯಕ್ -
Last Updated 1 ನವೆಂಬರ್ 2022, 5:55 IST
ಅಕ್ಷರ ಗಾತ್ರ

ಬೆಳ್ತಂಗಡಿ: ಮಲೆಕುಡಿಯರು ಪ್ರಕೃತಿಯ ಆರಾಧಕರು. ದೈವ ಮತ್ತು ದೇವರ ಬಗ್ಗೆ ನಂಬಿಕೆ-ಶ್ರದ್ಧೆಯುಳ್ಳವರಾಗಿದ್ದು, ಶ್ರಮಜೀವಿಗಳಾಗಿದ್ದಾರೆ. ಈ ಸಮುದಾಯವು ಅಭಿವೃದ್ಧಿ ಹೊಂದಬೇಕಾಗಿದೆ’ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪ್‌ಸಿಂಹ ನಾಯಕ್ ಹೇಳಿದರು.

ಮಲೆಕುಡಿಯರ ಸಂಘದ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಯೇನೆಪೋಯ ಆಸ್ಪತ್ರೆ ಮತ್ತು ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನೆ ಸಹಯೋಗದೊಂದಿಗೆ ಕೊಯ್ಯೂರು-ಶಿವಗಿರಿಯಲ್ಲಿರುವ ಮಲೆಕುಡಿಯರ ಸಭಾಭವನದಲ್ಲಿ ನಡೆದ ಉಚಿತ ಆರೋಗ್ಯ ತಪಾಸಣೆ ಹಾಗೂ ಆರೋಗ್ಯ ಕಾರ್ಡ್ ವಿತರಣಾ ಸಮಾರಂಭದಲ್ಲಿ ಮಾತನಾಡಿದರು.

‘ಅರಣ್ಯ ಮತ್ತು ಅಂಚಿನಲ್ಲಿರುವ ಮಲೆಕುಡಿಯರು ಸರ್ಕಾರ ಹಾಗೂ ಸಂಘ-ಸಂಸ್ಥೆಗಳ ಸಹಕಾರವನ್ನು ಪಡೆದು ಸಶಕ್ತರಾಗಬೇಕು’ ಎಂದರು.

ಯೆನೆಪೋಯ ವಿ.ವಿ.ಯ ಸಹಾಯಕ ಪ್ರಾಧ್ಯಾಪಕಿ ಡಾ. ಅಶ್ವಿನಿ ಶೆಟ್ಟಿ ಆರೋಗ್ಯ ಕಾಳಜಿಯ ಬಗ್ಗೆ ಮಾಹಿತಿ ನೀಡಿದರು. ತಾಲ್ಲೂಕು ಸಮಾಜ ಕಲ್ಯಾಣ ಅಧಿಕಾರಿ ಹೇಮಚಂದ್ರ ಮಾತನಾಡಿದರು.

ಮಲೆಕುಡಿಯರ ಸಂಘದ ಅಧ್ಯಕ್ಷ ಹರೀಶ್ ಎಳನೀರು ಅಧ್ಯಕ್ಷತೆ ವಹಿಸಿದ್ದರು.

ರಾಜ್ಯ ಮಲೆಕುಡಿಯರ ಸಂಘದ ಅಧ್ಯಕ್ಷ ಶ್ರೀಧರ ಗೌಡ ಈದು, ಬೆಳ್ತಂಗಡಿ ತಾಲ್ಲೂಕು ಸಮಿತಿಯ ಅಧ್ಯಕ್ಷ ಶಿವರಾಮ್ ಕೆ. ಉಜಿರೆ, ಜಿಲ್ಲಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಜಯೇಂದ್ರ ಎಂ. ನಿಡ್ಲೆ, ಕೋಶಾಧಿಕಾರಿ ಕೃಷ್ಣ ಪೂರ್ಜೆ, ಮೋಹನ್ ನಿಡ್ಲೆ, ಕರ್ನಾಟಕ ಅರಣ್ಯ ಮೂಲ ಬುಡಕಟ್ಟು ಸಮುದಾಯಗಳ ಒಕ್ಕೂಟ ಜಿಲ್ಲಾ ಸಂಚಾಲಕ ಬಾಲಕೃಷ್ಣ ಪೊಳಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT