ಬುಧವಾರ, 17 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಳೂರು: ಗುದದ್ವಾರದಲ್ಲಿ 729 ಗ್ರಾಂ ಚಿನ್ನ ಕಳ್ಳಸಾಗಣೆ

Published 4 ಮಾರ್ಚ್ 2024, 4:27 IST
Last Updated 4 ಮಾರ್ಚ್ 2024, 4:27 IST
ಅಕ್ಷರ ಗಾತ್ರ

ಮಂಗಳೂರು: ಗುದದ್ವಾರದಲ್ಲಿ ಚಿನ್ನ ಕಳ್ಳಸಾಗಣೆ ಮಾಡಿದ ಆರೋಪಿಯನ್ನು ಕಸ್ಟಮ್ಸ್‌ ಅಧಿಕಾರಿಗಳು ಬಜಪೆಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ವಶಕ್ಕೆ ಪಡೆದು, 24 ಕ್ಯಾರೆಟ್‌ನ ಒಟ್ಟು 729 ಗ್ರಾಂ ಚಿನ್ನವನ್ನು ಆತನಿಂದ ಸ್ವಾಧೀನಪಡಿಸಿಕೊಂಡಿದ್ದಾರೆ.

ದುಬೈನಿಂದ ವಿಮಾನದ ಮೂಲಕ ಪ್ರಯಾಣಿಸಿದ್ದ ಕಾಸರಗೋಡಿನ ಪ್ರಯಾಣಿಕನನ್ನು ಲೋಹಶೋಧಕದಿಂದ ಭಾನುವಾರ ತಪಾಸಣೆ ನಡೆಸಿದಾಗ ಬೀಪ್‌ ಶಬ್ದ ಬಂದಿತ್ತು. ಆತನನ್ನು ಕೂಲಂಕಷವಾಗಿ ಪರಿಶೀಲನೆಗೆ ಒಳಪಡಿಸಿದಾಗ ಗುದದ್ವಾರದಲ್ಲಿ ಅಂಡಾಕಾರದ  ಮೂರು ಗುಳಿಗೆಗಳು ಪತ್ತೆಯಾದವು. ಅವುಗಳಲ್ಲಿ ಒಟ್ಟು 729 ಗ್ರಾಂ ಚಿನ್ನ ಪತ್ತೆಯಾಗಿದ್ದು, ಅದರ ಮೌಲ್ಯ ₹ 45.92 ಲಕ್ಷ ಎಂದು ಅಂದಾಜಿಸಲಾಗಿದೆ ಎಂದು ಕಸ್ಟಮ್ಸ್‌ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT