ಮಂಗಳವಾರ, ಸೆಪ್ಟೆಂಬರ್ 27, 2022
27 °C

ಬಟ್ಟೆ ನುಂಗಿ ಸಾವು- ಬದುಕಿನ ಮಧ್ಯೆ ಒದ್ದಾಡುತ್ತಿದ ನಾಗರಹಾವಿನ ರಕ್ಷಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳ್ತಂಗಡಿ: ಬಟ್ಟೆಯನ್ನು ನುಂಗಿ ಸಾವು- ಬದುಕಿನ ಮಧ್ಯೆ ಒದ್ದಾಡುತ್ತಿದ ನಾಗರ ಹಾವನ್ನು ಸ್ನೇಕ್ ಅಶೋಕ್ ಲಾಯಿಲ ಅವರು ರಕ್ಷಣೆ ಮಾಡಿದ್ದಾರೆ.

ಬೆಳ್ತಂಗಡಿ ತಾಲ್ಲೂಕಿನ ಕಳಿಯ ಗ್ರಾಮದ ಗೇರುಕಟ್ಟೆ ಕುಳಾಯಿ ನಿವಾಸಿ ಶೇಖರ್ ಶೆಟ್ಟಿ ಅವರ ಮನೆಯ ಪಕ್ಕದಲ್ಲಿರುವ ಕೊಟ್ಟಿಗೆ ಒಳಗಡೆ ಬಿಸಾಡಿದ ಮಗುವಿನ  ಬಟ್ಟೆಯೊಂದನ್ನು ಸುಮಾರು 4.5 ಉದ್ದದ ನಾಗರ ಹಾವು ನುಂಗಿದ್ದು, ಕೊನೆಗೆ ಸಿಕ್ಕಿಹಾಕಿಕೊಂಡು ಒದ್ದಾಡುತ್ತಿದ್ದಾಗ ಮನೆಯವರು ನೋಡಿ ಸ್ನೇಕ್ ಅಶೋಕ್ ಲಾಯಿಲ ಅವರಿಗೆ ಮಾಹಿತಿ ನೀಡಿದರು. 

ಸ್ಥಳಕ್ಕೆ ಬಂದ ಸ್ನೇಕ್ ಅಶೋಕ್   ಹಾವಿನ ಬಾಯಿಯಿಂದ ಬಟ್ಟೆ  ಹೊರತೆಗೆದು ರಕ್ಷಣೆ ಮಾಡಿ ನಂತರ ಸುರಕ್ಷಿತವಾಗಿ ಕಾಡಿಗೆ ಬಿಡುವಲ್ಲಿ ಯಶಸ್ವಿಯಾಗಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು