ಗುರುವಾರ , ಜುಲೈ 29, 2021
22 °C

ನೇತ್ರಾವತಿ ನದಿಗೆ ಜಿಗಿದ ವ್ಯಕ್ತಿ ನಾಪತ್ತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಉಳ್ಳಾಲ ನಿವಾಸಿಯಾಗಿರುವ ಸುರೇಂದ್ರ ರೈ (45) ಎಂಬುವವರು ಶುಕ್ರವಾರ ಸಂಜೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿರುವ ಸೇತುವೆಯಿಂದ ನೇತ್ರಾವತಿ ನದಿಗೆ ಜಿಗಿದಿದ್ದು, ಆ ಬಳಿಕ ನಾಪತ್ತೆಯಾಗಿದ್ದಾರೆ.

ಸುರೇಂದ್ರ ಕಂಕನಾಡಿಯಲ್ಲಿ ಭದ್ರತಾ ಸಿಬ್ಬಂದಿಯಾಗಿದ್ದರು. ಅವರ ಪತ್ನಿ ಕೇರಳದಲ್ಲಿದ್ದಾರೆ. ಲಾಕ್‌ಡೌನ್‌ನಿಂದಾಗಿ ಪತ್ನಿಯನ್ನು ಭೇಟಿಯಾಗಲು ಸಾಧ್ಯವಾಗಿಲ್ಲ ಎಂಬ ಕಾರಣದಿಂದ ನೊಂದುಕೊಂಡಿದ್ದರು. ಶುಕ್ರವಾರ ಸಂಜೆ ಕೆಲಸ ಮುಗಿಸಿ ಮನೆಗೆ ಮರಳುವಾಗಿ ಸೇತುವೆಯ ಮೇಲೆ ಮೊಬೈಲ್‌ ಇರಿಸಿ ನದಿಗೆ ಜಿಗಿದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ವ್ಯಕ್ತಿ ನದಿಗೆ ಜಿಗಿಯುವುದನ್ನು ಕಂಡ ವಾಹನ ಸವಾರರು ಈ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಬಂದ ಪೊಲೀಸರಿಗೆ ಮೊಬೈಲ್‌ ಸಿಕ್ಕಿದೆ. ಅದರಿಂದ ಪತ್ನಿಯ ಮೊಬೈಲ್‌ಗೆ ಕರೆಮಾಡಿದ ಪೊಲೀಸರು ಹೆಚ್ಚಿನ ಮಾಹಿತಿ ಸಂಗ್ರಹಿಸಿದ್ದಾರೆ. ಘಟನೆಯ ಕುರಿತು ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೇರಳದಲ್ಲಿದ್ದ ಪತ್ನಿ ವಾಪಸಾಗಿ ಉಳ್ಳಾಲ ಪೊಲೀಸ್‌ ಠಾಣೆಗೆ ಮತ್ತೊಂದು ದೂರು ಸಲ್ಲಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು