ಗುರುವಾರ , ಆಗಸ್ಟ್ 22, 2019
27 °C

ಶಾಲಾ, ಕಾಲೇಜಿಗೆ ಇಂದು ರಜೆ

Published:
Updated:

ಮಂಗಳೂರು: ಭಾರಿ ಮಳೆ ಬೀಳುವ ಸಾಧ್ಯತೆ ಇದೆ ಎಂಬ ಮುನ್ನೆಚ್ಚರಿಕೆಯ ಕಾರಣದಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿಯಿಂದ ಪದವಿಪೂರ್ವ ಕಾಲೇಜಿನವರೆಗಿನ ಎಲ್ಲ ಶಿಕ್ಷಣ ಸಂಸ್ಥೆಗಳಿಗೆ ಮಂಗಳವಾರ ರಜೆ ಘೋಷಿಸಲಾಗಿದೆ.

ಮಂಗಳವಾರ ಜಿಲ್ಲೆಯಲ್ಲಿ 200 ಮಿಲಿ ಮೀಟರ್‌ಗೂ ಹೆಚ್ಚು ಮಳೆಯಾಗಬಹುದು ಎಂಬ ಮುನ್ಸೂಚನೆ ಆಧರಿಸಿ, ‘ರೆಡ್‌ ಅಲರ್ಟ್‌’ ಘೋಷಿಸಲಾಗಿದೆ. ಈ ಕಾರಣದಿಂದ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಸಸಿಕಾಂತ್‌ ಸೆಂಥಿಲ್‌ ಸೋಮವಾರ ರಾತ್ರಿ ಆದೇಶ ಹೊರಡಿಸಿದ್ದಾರೆ. ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಈ ಆದೇಶ ಅನ್ವಯವಾಗಲಿದೆ.

ಮಕ್ಕಳು ತಗ್ಗು ಪ್ರದೇಶ, ಕೆರೆ, ನದಿ ಮತ್ತು ಸಮುದ್ರ ತೀರಕ್ಕೆ ಹೋಗದಂತೆ ಪೋಷಕರು ಎಚ್ಚರಿಕೆ ವಹಿಸಬೇಕು. ಮೀನುಗಾರರು ಈ ಅವಧಿಯಲ್ಲಿ ಸಮುದ್ರಕ್ಕೆ ಇಳಿಯಬಾರದು. ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿ ಇರಬೇಕು. ಪ್ರವಾಸಿಗರು ಮತ್ತು ಸಾರ್ವಜನಿಕರು ನದಿ, ಸಮುದ್ರ ತೀರಕ್ಕೆ ಇಳಿಯದಂತೆ ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Post Comments (+)