ಶುಕ್ರವಾರ, ಜುಲೈ 1, 2022
23 °C

ಮಂಗಳೂರು: 14ನೇ ಮಹಡಿಯಿಂದ ಜಿಗಿದು ವೃದ್ಧೆ ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಕಂಕನಾಡಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯ  ಮಹಿಳೆಯೊಬ್ಬರು ಗುರುವಾರ ಅಪಾರ್ಟ್‌ಮೆಂಟ್‌ ನ 14ನೇಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನಗರದ ಕುಲಶೇಖರ ಚೌಕಿ ಎಂಬಲ್ಲಿನ ನಿವಾಸಿ ಪುಷ್ಪಲತಾ (64) ಮೃತರು.

ಕುಲಶೇಖರ ಚೌಕಿಯಲ್ಲಿರುವ ಬಹುಮಹಡಿಗಳ ಅಪಾರ್ಟ್‌ಮೆಂಟ್‌ನ 14ನೇ ಮಹಡಿಯಲ್ಲಿರುವ ಮನೆಯ ಬಾಲ್ಕನಿಯಿಂದ ಜಿಗಿದಿದ್ದರು.

ಅವರು ಮಾನಸಿಕ ಒತ್ತಡದಿಂದ ಬಳಲುತ್ತಿದ್ದರು, ಮೊದಲೊಮ್ಮೆ ಆತ್ಮಹತ್ಯೆಗೆ ಯತ್ನ ನಡೆಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು