ಸೋಮವಾರ, ಆಗಸ್ಟ್ 10, 2020
21 °C

ಮಂಗಳೂರು | ದುಷ್ಕರ್ಮಿಗಳಿಂದ ದಾಳಿ: ಗ್ರಾ.ಪಂ.ಮಾಜಿ ಸದಸ್ಯನ ಕೊಲೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು:  ನಗರದ ಹೊರವಲಯದ ಅಡ್ಯಾರ್‌ನಲ್ಲಿ ಶುಕ್ರವಾರ ತಡರಾತ್ರಿ ನಡೆದ ಮಾತಿನ ಚಕಮಕಿಯಲ್ಲಿ ಗುಂಪೊಂದು ವ್ಯಕ್ತಿ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದು, ಗಂಭೀರ ಗಾಯಗೊಂಡ ವ್ಯಕ್ತಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಅಡ್ಯಾರ್ ನಿವಾಸಿ, ಗ್ರಾಮ ಪಂಚಾಯತಿ ಮಾಜಿ ಸದಸ್ಯ ಯಾಕೂಬ್ (36) ಕೊಲೆಯಾದ ವ್ಯಕ್ತಿ.

ಸ್ಥಳೀಯ ಹೆಂಗಸೊಬ್ಬರ ಮನೆಗೆ ವ್ಯಕ್ತಿಯೊಬ್ಬ ಆಗಾಗ ಬಂದು-ಹೋಗುತ್ತಿದ್ದ. ಇದನ್ನು ಯಾಕೂಬ್ ಪ್ರಶ್ನಿಸುತ್ತಿದ್ದರು. ಶುಕ್ರವಾರ ರಾತ್ರಿಯೂ ಇದು ಪುನರಾವರ್ತನೆ ಗೊಂಡಿದೆ. ರಿಟ್ಜ್‌ ಕಾರಿನಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ಯಾಕೂಬ್‌ ಅವರಿಗೆ ಥಳಿಸುವುದರ ಜೊತೆಗೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

 ತೀವ್ರವಾಗಿ ಗಾಯಗೊಂಡಿದ್ದ ಯಾಕೂಬ್ ಅವರನ್ನು  ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳ ಶೋಧ ಆರಂಭಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು