ಮಂಗಳೂರು: ನಗರಕ್ಕೆ ಭೇಟಿ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರುಕೋಟೆಕಾರು ಬ್ಯಾಂಕ್ ನಲ್ಲಿ ನಡೆದ ದರೋಡೆ ಪ್ರಕರಣದ ಹಿನ್ನೆಲೆಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ತುರ್ತು ಸಭೆ ನಡೆಸಿದರು. ಆರೋಪಿಗಳ ಶೀಘ್ರ ಪತ್ತೆಗೆ ಸೂಚನೆ ನೀಡಿದರು.
.ಸಿನಿಮೀಯ ಶೈಲಿಯಲ್ಲಿ ದರೋಡೆ; ಬೆಚ್ಚಿಬಿದ್ದ ಬೀದರ್ ಜನ.
ಘಟನೆ ಕುರಿತು ಸಮಗ್ರ ಮಾಹಿತಿ ಪಡೆದ ಮುಖ್ಯಮಂತ್ರಿ, 'ಆರೋಪಿಗಳು ಸಲೀಸಾಗಿ ತಪ್ಪಿಸಿಕೊಂಡು ಹೋಗಿದ್ದು ಹೇಗೆ? ಎಷ್ಟು ಟೋಲ್ಗಳನ್ನು ದಾಟಿ ಹೋಗಿದ್ದಾರೆ? ಟೋಲ್ಗಳಲ್ಲಿ ಯಾಕೆ ತಪಾಸಣೆ ಬಿಗಿಗೊಳಿಸಿಲ್ಲ ಎಂದು ಪ್ರಶ್ನಿಸಿದ್ದಾಗಿ ಮೂಲಗಳು ತಿಳಿಸಿವೆ.

ಸಹಕಾರಿ ಬ್ಯಾಂಕ್ ನಲ್ಲಿ ಭದ್ರತಾ ಸಿಬ್ಬಂದಿ ಇರಲಿಲ್ಲ. ಐದಾರು ಮಂದಿ ಮಾತ್ರ ಬ್ಯಾಂಕ್ ಸಿಬ್ಬಂದಿ ಇದ್ದರು. ಆರೋಪಿಗಳು ಕನ್ನಡ ಮತ್ತು ಹಿಂದಿಯಲ್ಲಿ ಮಾತಾಡಿರುವುದು ದಾಖಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮುಖ್ಯಮಂತ್ರಿಗೆ ಮಾಹಿತಿ ನೀಡಿದರು.
.ಮಂಗಳೂರು: ಬಂದೂಕು ತೋರಿಸಿ ಬ್ಯಾಂಕ್ನಿಂದ ಚಿನ್ನ- ನಗದು ದರೋಡೆ.
ಎಲ್ಲ ಟೋಲ್ ಗಳಲ್ಲಿ ತಪಾಸಣೆ ಬಿಗಿಗೊಳಿಸಬೇಕು. ನಾಲ್ಕು ಜಿಲ್ಲೆಗಳ ವ್ಯಾಪ್ತಿಯಲ್ಲಿ ನಾಕಾಬಂದಿ ಹಾಕಿ ಆದಷ್ಟು ಬೇಗ ಆರೋಪಿಗಳನ್ನು ಬಂಧಿಸಬೇಕು ಎಂದು ಮುಖ್ಯಮಂತ್ರಿ ಸೂಚನೆ ನೀಡಿದರು ಎಂಬ ಮಾಹಿತಿ ಲಭ್ಯವಾಗಿದೆ.
.ಬೀದರ್ | ಸಿಬ್ಬಂದಿ ಮೇಲೆ ಗುಂಡಿನ ದಾಳಿ: ಒಬ್ಬನ ಸಾವು, ₹92 ಲಕ್ಷ ದರೋಡೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.